Mazagon Dock Recruitment 2021 : 425 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

ಮಜಗಾನ್ ಡಾಕ್ ಶಿಪ್‌ಬ್ಯುಲ್ಡರ್ಸ್ ಲಿಮಿಟೆಡ್ (ಮಜಗಾನ್ ಡಾಕ್) ನಲ್ಲಿ425 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ ಮೂಲಕ ಆಗಸ್ಟ್ 10ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 
ಮಜಗಾನ್ ಡಾಕ್ ನಲ್ಲಿ 425 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ:

೮ನೇ ತರಗತಿ, 10ನೇ ತರಗತಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಆಗಸ್ಟ್ 1,2021ರ ಅನ್ವಯ ಕನಿಷ್ಟ 14 ರಿಂದ ಗರಿಷ್ಟ 21 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 2500/- ರಿಂದ 8,050/-ರೂ ಸ್ಟೈಫೆಂಡ್ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಆನ್‌ಲೈನ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ದಿವ್ಯಾಂಗ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://mazagondock.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್‌ 10,2021ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Mazagon dock recruitment 2021 notification has been released for 425 trade apprentice posts. Interested candidates can apply before august 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X