ಮಜಗಾನ್ ಡಾಕ್ ಶಿಪ್‌ಬ್ಯುಲ್ಡರ್ಸ್ ಲಿಮಿಟೆಡ್ ನಲ್ಲಿ 445 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 7,2022 ರಿಂದ ಜುಲೈ 21,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

Mazagon Dock ನೇಮಕಾತಿ 2022 ವಿದ್ಯಾರ್ಹತೆ :
ಮಜಗಾನ್ ಡಾಕ್ ಶಿಪ್‌ಬ್ಯುಲ್ಡರ್ಸ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ 10ನೇ ತರಗತಿ, 8ನೇ ತರಗತಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಹೊಂದಿರಬೇಕು.
Mazagon Dock ನೇಮಕಾತಿ 2022 ವಯೋಮಿತಿ :
ಮಜಗಾನ್ ಡಾಕ್ ಶಿಪ್‌ಬ್ಯುಲ್ಡರ್ಸ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ್ 14 ರಿಂದ 21 ವರ್ಷ ವಯೋಮಿತಿಯೊಳಗಿರಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Mazagon Dock ನೇಮಕಾತಿ 2022 ವೇತನ :
ಮಜಗಾನ್ ಡಾಕ್ ಶಿಪ್‌ಬ್ಯುಲ್ಡರ್ಸ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 3,000/- ರಿಂದ 8,050/-ರೂ ಸ್ಟೈಫೆಂಡ್ ಅನ್ನು ನೀಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಹೇಳಲಾಗಿದೆ.

Mazagon Dock ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಮಜಗಾನ್ ಡಾಕ್ ಶಿಪ್‌ಬ್ಯುಲ್ಡರ್ಸ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.
Mazagon Dock ನೇಮಕಾತಿ 2022 ಅರ್ಜಿ ಶುಲ್ಕ :
ಮಜಗಾನ್ ಡಾಕ್ ಶಿಪ್‌ಬ್ಯುಲ್ಡರ್ಸ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ದಿವ್ಯಾಂಗ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
Mazagon Dock ನೇಮಕಾತಿ 2022 ಅರ್ಜಿ ಸಲ್ಲಿಕೆ :
ಮಜಗಾನ್ ಡಾಕ್ ಶಿಪ್‌ಬ್ಯುಲ್ಡರ್ಸ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://mazagondock.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜುಲೈ 7 ರಿಂದ ಜುಲೈ 21,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











