ಮೆಟಲರ್ಜಿಕಲ್ ಮತ್ತು ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ (ಇಂಡಿಯಾ) ಲಿಮಿಟೆಡ್ (ಮೆಕಾನ್ ಲಿಮಿಟೆಡ್) ನೇಮಕಾತಿ 205 ಇಂಜಿನಿಯರಿಂಗ್ ಮತ್ತು ನಾನ್ -ಇಂಜಿನಿಯರಿಂಗ್ ವೃತ್ತಿಪರರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಜೂನ್ 20,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಇಂಜಿನಿಯರಿಂಗ್ ಮತ್ತು ನಾನ್ -ಇಂಜಿನಿಯರಿಂಗ್ ವೃತ್ತಿಪರರು |
| Organisation | ಮೆಟಲರ್ಜಿಕಲ್ ಮತ್ತು ಇಂಜಿನಿಯರಿಮಗ್ ಕನ್ಸಲ್ಟೆಂಟ್ಸ್ (ಇಂಡಿಯಾ) ಲಿಮಿಟೆಡ್ ( ಮೆಕಾನ್ ಲಿಮಿಟೆಡ್) |
| Educational Qualification | ಪದವಿ,ಎಂಬಿಎ,ಬಿಎಸ್ಸಿ / ಬಿಇ / ಬಿ.ಟೆಕ್, ಬಿಕಾಂ, ಸಿಎ / ಸಿಎಂಎ, ಪಿಜಿಡಿಬಿಎಂ,ಸ್ನಾತಕೋತ್ತರ ಪದವಿ,ಡಿಪ್ಲೋಮ, ಬಿ. ಆರ್ಕ್, ಇಂಜಿನಿಯರಿಂಗ್ ಪದವಿ, |
| Job Location | ಭಾರತದೆಲ್ಲೆಡೆ |
| Salary Scale | ಹುದ್ದೆಗಳಿಗನುಸಾರ |
| Application Start Date | May 23, 2019 |
| Application End Date | June 20, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಹುದ್ದೆಗಳಿಗನುಸಾರ ಪದವಿ,ಎಂಬಿಎ,ಬಿಎಸ್ಸಿ / ಬಿಇ / ಬಿ.ಟೆಕ್, ಬಿಕಾಂ, ಸಿಎ / ಸಿಎಂಎ, ಪಿಜಿಡಿಬಿಎಂ,ಸ್ನಾತಕೋತ್ತರ ಪದವಿ,ಡಿಪ್ಲೋಮ, ಬಿ. ಆರ್ಕ್ ಮತ್ತು ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಹುದ್ದೆಗಳಿಗನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಈ ಬಗೆಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ತಿಳಿದುಕೊಳ್ಳಬಹುದು.
ವೇತನದ ವಿವರ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 1000/-ರೂ ಅನ್ನು ಆನ್‌ಲೈನ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಯೂಡಿ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿಕೊಳ್ಳಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ,ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ http://www.meconlimited.co.in/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 20,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.


Click it and Unblock the Notifications











