ಅಕ್ಟೋಬರ್ ತಿಂಗಳಲ್ಲಿ ಬೃಹತ್ ಉದ್ಯೋಗ ಮೇಳ

Posted By:

ಶಿವಮೊಗ್ಗದಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸುಮಾರು 150 ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದ್ದು ಸಾವಿರಾರು ಮಂದಿಗೆ ಉದ್ಯೋಗದ ಅವಕಾಶ ಕಲ್ಪಿಸಲಾಗುತ್ತಿದೆ.

ಜಿಲ್ಲೆಯ ನಿರುದ್ಯೋಗಿ ಯುವಕ ಯುವತಿಯರಿಗೆ ಮಾತ್ರವಲ್ಲದೆ ಉದ್ಯೋಗ ಮಾರುಕಟ್ಟೆಯಲ್ಲಿ ಉತ್ತಮ ಅವಕಾಶಗಳನ್ನು ಎದುರು ನೋಡುತ್ತಿರುವವರಿಗೆ ಅವಕಾಶಗಳನ್ನು ಕಲ್ಪಿಸಲು ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ.

ಬೃಹತ್ ಉದ್ಯೋಗ ಮೇಳ

ಜಿಲ್ಲಾಧಿಕಾರಿ ಡಾ.ಕೆ.ಎಂ.ಲೋಕೇಶ್ ಅಧಿಕಾರಿಗಳ ಜೊತೆ ಉದ್ಯೋಗ ಮೇಳದ ಸಿದ್ಧತೆ ಕುರಿತು ಸಭೆ ನಡೆಸಿದ್ದಾರೆ. ಕುವೆಂಪು ರಂಗಮಂದಿರದ ಹೊರಾಂಗಣ ಹಾಗೂ ಆಚಾರ್ಯ ತುಳಸಿ ರಾಷ್ಟ್ರೀಯ ಕಾಲೇಜಿಗೆ ಗುರುವಾರ ಭೇಟಿ ನೀಡಿ, ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು.

ಉದ್ಯೋಗ ಮೇಳದಲ್ಲಿ ಸುಮಾರು 125ರಿಂದ 150ಕಂಪೆನಿಗಳು ಭಾಗವಹಿಸುವ ನಿರೀಕ್ಷೆ ಇದ್ದು, 10ಸಾವಿರ ಅಭ್ಯರ್ಥಿಗಳು ಭಾಗವಹಿಸಬಹುದು ಎಂದು ಅಂದಾಜಿಸಲಾಗಿದೆ.

ಪದವಿ, ಸ್ನಾತಕೋತ್ತರ ಪದವಿ, ದ್ವಿತೀಯ ಪಿಯುಸಿ, ಡಿಪ್ಲೊಮಾ, ಐಟಿಐ ಸೇರಿದಂತೆ ವಿವಿಧ ಕೋರ್ಸುಗಳನ್ನು ಮಾಡಿರುವ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಉದ್ಯೋಗಾಕಾಂಕ್ಷಿಗಳು ಹಾಗೂ ಕಂಪೆನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆನ್‌ಲೈನ್ ಮೂಲಕ ನೋಂದಣಿ ಮಾಡಬೇಕು. ಇದಕ್ಕಾಗಿ ವೆಬ್‌ಸೈಟ್ ಆರಂಭಿಸಲಾಗುತ್ತದೆ. ಮೇಳದಲ್ಲಿ ಭಾಗವಹಿಸುವ ಕಂಪೆನಿಗಳ ವಿವರ, ನೋಂದಣಿ ಮಾಹಿತಿ, ಅಭ್ಯರ್ಥಿಗಳಿಗೆ ಸೂಚನೆಗಳು ಇತ್ಯಾದಿ ಮಾಹಿತಿಯನ್ನು ಅಲ್ಲಿ ನೀಡಲಾಗುತ್ತದೆ.

ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಭಾಗವಹಿಸಲು ಅನುಕೂಲವಾಗುವಂತೆ ತಾಲೂಕು ಮಟ್ಟದಲ್ಲಿ ಸಹ ಮಾಹಿತಿ ಕೇಂದ್ರಗಳನ್ನು ತೆರೆಯಲಾಗುತ್ತದೆ. ಅಭ್ಯರ್ಥಿಗಳು ಸಮರ್ಪಕವಾಗಿ ಬಯೋಡಾಟಾ ಸಿದ್ಧಪಡಿಸಲು ಹಾಗೂ ಸಂದರ್ಶನವನ್ನು ಎದುರಿಸಲು ತಾಲೂಕು ಮಟ್ಟದಲ್ಲಿ ತರಬೇತಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಎರಡು ದಿನಗಳ ಕಾಲ ಉದ್ಯೋಗ ಮೇಳ ನಡೆಯಲಿದ್ದು, ಪ್ರಥಮ ದಿನ ನೋಂದಣಿ ಮಾಡಿದ ಅಭ್ಯರ್ಥಿಗಳಿಗೆ, ಎರಡನೇ ದಿನ ಸ್ಥಳದಲ್ಲೇ ನೋಂದಣಿ ಮಾಡಲು ಬಯಸುವ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗುತ್ತದೆ. ಮೇಳ ನಡೆಯುವ ದಿನಾಂಕ ಇನ್ನೂ ಅಂತಿಮಗೊಂಡಿಲ್ಲ.

English summary
Shivamogga district administration will organize two days mega job fair in Shivamogga on the month of October, 2017. Job fair date will announced soon.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia