ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನವೆಂಬರ್ 23ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ.
ಹಾಸನದ ಹೆಸರಾಂತ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುತ್ತಿವೆ. ಉದ್ಯೋಗ ವಿನಿಮಯ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಉದ್ಯೋಗ ಮೇಳ ನಡೆಯಲಿದೆ.
ವಿದ್ಯಾರ್ಹತೆ
ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಪದವಿ, ಡಿಪ್ಲೊಮಾ, ಎಂಬಿಎ, ಇಂಜಿನಿಯರಿಂಗ್ನಲ್ಲಿ ತೇರ್ಗಡೆ ಹೊಂದಿರುವವರು ಭಾಗವಹಿಸಬಹುದಾಗಿದೆ.
ವಯೋಮಿತಿ
18 ರಿಂದ 35 ವರ್ಷ ವಯೋಮಾನದ ಯುವಕ/ಯುವತಿಯರು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಆಸಕ್ತಿ ಹೊಂದಿದವರು, ಅಂಕಪಟ್ಟಿಗಳ ಜೆರಾಕ್ಸ್, ಆಧಾರ್ ಕಾರ್ಡ್, ಸ್ವವಿವರ, ಭಾವಚಿತ್ರದೊಂದಿಗೆ ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಗೆ ಹಾಜರಾಗಬಹುದು.
ಅಗತ್ಯ ದಾಖಲೆಗಳನ್ನು ಕೊಂಡೊಯ್ಯಿರಿ
- ರೆಸ್ಯುಮ್ ಮತ್ತು ಬಯೋಡೆಟಾ.
- ಕನಿಷ್ಠ ಮೂರು ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳು.
- ಭಾವ ಚಿತ್ರವಿರುವ ಗುರುತು ಚೀಟಿಗಳು ಹಾಗು ಅವುಗಳ ಝೆರಾಕ್ಸ್ ಪ್ರತಿಗಳು.
- ಈ ಹಿಂದೆ ಎಲ್ಲಾದರು ಕೆಲಸ ಮಾಡಿದ್ದರೆ ಅದರ ಸೇವಾನುಭವದ ಪ್ರಮಾಣ ಪತ್ರ
ಉದ್ಯೋಗ ಮೇಳ ನಡೆಯುವ ಸ್ಥಳ : ಉದ್ಯೋಗ ವಿನಿಮಯ ಕಚೇರಿ, ಹಾಸನ
ಉದ್ಯೋಗ ಮೇಳ ನಡೆಯುವ ದಿನಾಂಕ : ನವೆಂಬರ್ 23 ಬೆಳಗ್ಗೆ 10 ಗಂಟೆಗೆ
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಜೆ.ಬಿ.ವಿಜಯಲಕ್ಷ್ಮಿ ಅವರನ್ನು ಸಂಪರ್ಕಿಸಬಹುದಾಗಿದೆ.
ಉದ್ಯೋಗ ಮೇಳಕ್ಕೆ ಹೋಗುವ ಮುನ್ನ ಮೊದಲನೆಯದಾಗಿ ಉದ್ಯೋಗ ಮೇಳದಲ್ಲಿ ಭಾಗವಹಿಸುವವರು ಅಲ್ಲಿಗೆ ಹೋಗುವ ಮುನ್ನ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಬೇಕು. ಸಂದರ್ಶನದ ವೇಳೆಗಿಂತ ಸ್ವಲ್ಪ ಮೊದಲೇ ಸ್ಥಳ ತಲುಪಿ. ಸರಳವಾದ ಉಡುಗೆ ಧರಿಸಿ. ಮೇಕಪ್ ಸಹ ಸರಳವಾಗಿ ಗೌರವಯುತವಾಗಿದ್ದು, ಸ್ಮಾರ್ಟ್ ಲುಕ್ ಕೊಡುವಂತೆ ಇರಬೇಕು.
ನಿಮ್ಮ ಸಾಮರ್ಥ್ಯ, ಕೆಲಸದ ಬಗೆಗಿರುವ ಆಸಕ್ತಿ, ಶ್ರಮ, ದುಡಿಮೆ, ಪ್ರಾಮಾಣಿಕತನದ ಬಗ್ಗೆ ಹೇಳಿ. ನೆನಪಿರಲಿ, ಆತ್ಮಪ್ರಶಂಸೆ ಅತಿಯಾಗದಂತೆ ಗಮನ ವಹಿಸಿ. ನಿಮಗಿರುವ ಪರಿಣತಿ, ವಿಶೇಷ ಅರಿವು, ಎಂಥ ಒತ್ತಡಕ್ಕೂ ಒಳಗಾಗದೇ ದುಡಿಯುವ ಮನೋಭಾವ, ಎಲ್ಲದರಲ್ಲೂ ನಿಮಗಿರುವ ಜ್ಞಾನದ ಬಗ್ಗೆ ತಿಳಿಸಿ ಅವರ ಗಮನ ಸೆಳೆಯಿರಿ.