ಮಂಗಳೂರು ವಿದ್ಯುತ ಸರಬರಾಜು ಕಂಪೆನಿಯಲ್ಲಿ 200 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಸೆಪ್ಟೆಂಬರ್ 9ರೊಳಗೆ ಅರ್ಜಿಯನ್ನು ಹಾಕಬಹುದು.

ವಿದ್ಯಾರ್ಹತೆ:
ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಮತ್ತು ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಸಬಹುದು.
ವಯೋಮಿತಿ:
ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವೇತನ:
ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 5000/- ರಿಂದ 7000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಎನ್‌ಎಟಿಎಸ್ ಪೋರ್ಟಲ್ ನಲ್ಲಿ ಸೆಪ್ಟೆಂಬರ್ 5,2021ರೊಳಗೆ ತಮ್ಮ ಹೆಸರನ್ನು ನೊಂದಾಯಿಸಿಕೊಂಡು ತದನಂತರ ಮೆಸ್ಕಾಂ ಅಧಿಕೃತ ವೆಬ್‌ಸೈಟ್ https://mescom.karnataka.gov.in/ ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 9,2021ರೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











