ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಸಮಾಲೋಚಕ ಸಿಬ್ಬಂದಿಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಸೆಪ್ಟೆಂಬರ್ 26,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ :
ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಸಮಾಲೋಚಕ ಸಿಬ್ಬಂದಿ ಹುದ್ದೆಗೆ ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯ/ಬೋರ್ಡ್ ನಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವೇತನ:
ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಸಮಾಲೋಚಕ ಸಿಬ್ಬಂದಿ ಹುದ್ದೆಗೆ ಆಯ್ಕೆಯಾದ ಬಿ.ಟೆಕ್ ಅಭ್ಯರ್ಥಿಗೆ ತಿಂಗಳಿಗೆ 30,000/-ರೂ ಮತ್ತು ಎಂ.ಟೆಕ್ ಅಭ್ಯರ್ಥಿಗೆ ತಿಂಗಳಿಗೆ 35,000/-ರೂ ವೇತನವನ್ನು ನೀಡಲಾಗುವುದು.
ವಯೋಮಿತಿ ಮತ್ತು ಆಯ್ಕೆ ಪ್ರಕ್ರಿಯೆ:
ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಸಮಾಲೋಚಕ ಸಿಬ್ಬಂದಿ ಹುದ್ದೆಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು ಮತ್ತು ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಅಧಿಕೃತ ವೆಬ್ಸೈಟ್ https://mgired.kar.nic.in/index.html ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಸೆಪ್ಟೆಂಬರ್ 26,2021ರೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.