ಗೃಹ ಸಚಿವಾಲಯದಲ್ಲಿ 39 ಗ್ರೂಪ್ ಎ, ಬಿ ಮತ್ತು ಸಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆಫ್‌ಲೈನ್ ಮೂಲಕ ಏಪ್ರಿಲ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
ದ್ವಿತೀಯ ಪಿಯುಸಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ಪ.ಪಂ/ಓಬಿಸಿ/ಅಂಗವಿಕಲ/ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ತಲುಪಿಸುವ ಮೂಲಕ ಏಪ್ರಿಲ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











