ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 14 ಬೋಧಕ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸೆಪ್ಟೆಂಬರ್ 11,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:
ಹುದ್ದೆಗಳಿಗನುಸಾರ ಗರಿಷ್ಟ 35, 45 ಮತ್ತು 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

ವೇತನದ ವಿವರ:
ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಅಭ್ಯರ್ಥಿಯು 1,000/-ರೂ ಅನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸೆಪ್ಟೆಂಬರ್ 11,2019ರೊಳಗೆ ಸಲ್ಲಿಸಬೇಕಿರುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಾತ್ರ ಸೆಪ್ಟೆಂಬರ್ 18,2019ರಂದು ನಡೆಯುವ ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ