ಎಂಎಂಟಿಸಿ ಲಿಮಿಟೆಡ್ ನೇಮಕಾತಿ 26 ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ದೇಶದ ಬಹುದೊಡ್ಡ ಇಂಟರ್ ನ್ಯಾಷನಲ್ ಟ್ರೇಡಿಂಗ್ ಕಂಪೆನಿ ಎಂಎಂಟಿಸಿ ಲಿಮಿಟೆಡ್ ನಲ್ಲಿ ಖಾಲಿ ಇರುವ 26 ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಫೆಬ್ರವರಿ 20,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಎಂಎಂಟಿಸಿ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಡೆಪ್ಯುಟಿ ಮ್ಯಾನೇಜರ್
Organisation ಎಂಎಂಟಿಸಿ ಲಿಮಿಟೆಡ್
Educational Qualification ಪದವಿ,ಸ್ನಾನಕೋತ್ತರ ಪದವಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 40,000/- ರಿಂದ 1,40,000/-ರೂ
Application Start Date January 30, 2019
Application End Date February 20, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಾಣಿಜ್ಯ/ವಿಜ್ಞಾನ/ಕಲಾ (ಎಕನಾಮಿಕ್ಸ್/ಸ್ಟ್ಯಾಟಿಸ್ಟಿಕ್ಸ್)/ ಬ್ಯುಸಿನೆಸ್ ಅಡ್ಮಿನಿಸ್ಟ್ರೇಶನ್/ ಇಂಜಿನಿಯರಿಂಗ್ ಪದವಿಯನ್ನು ಶೇ60% ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು; ಮತ್ತು 2 ವರ್ಷಗಳ ಪೂರ್ಣಕಾಲಿಕ ಸ್ನಾತಕೋತ್ತರ ಪದವಿ/ ಡಿಪ್ಲೋಮ/ಎಂಬಿಎ/ ಬ್ಯುಸಿನೆಸ್ ಅಡ್ಮಿನಿಸ್ಟ್ರೇಶನ್ ನಲ್ಲಿ ಎಂಎಂಎಸ್ / ಮ್ಯಾನೇಜ್ಮೆಂಟ್/ಮಾರ್ಕೆಟಿಂಗ್/ಇಂಟರ್ ನ್ಯಾಷನಲ್ ಬ್ಯುಸಿನೆಸ್ ಅನ್ನು ಶೇ60%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಅಥವಾ ಪದವಿಯಲ್ಲಿ ಶೇ 60%ರಷ್ಟು ಅಂಗಳೊಂದಿಗೆ ಉತ್ತೀರ್ಣರಾಗಿರಬೇಕು ಮತ್ತು ಚಾರ್ಟೆಡ್ ಅಕೌಂಟೆಂಟ್ ಅಥವಾ ಕಾಸ್ಟ್ ಮತ್ತು ಮ್ಯಾನೇಜ್ಮೆಂಟ್ ಅಕೌಂಟೆಂಟ್ ಅಥವಾ ಕಾನೂನು ಪದವಿ ಅಥವಾ ಸ್ನಾತಕೋತ್ತರ ಪದವಿ ಯನ್ನು ಹಿಂದಿಭಾಷೆಯಲ್ಲಿ ಮಾಡಿರುವುದರ ಜೊತೆಗೆ ಇಂಗ್ಲೀಷ್ ಅನ್ನು ಪದವಿ ಅಥವಾ ಸ್ನಾತಕೋತ್ತರ ಪದವಿಯಲ್ಲಿ ಪ್ರಮುಖ ಭಾಷೆಯನ್ನಾಗಿ ಅಭ್ಯಸಿಸಿರಬೇಕು ಅಲ್ಲದೇ ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಶೇ60%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 1,40,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ವಿಧಾನ:‌

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಬೇಸ್ಡ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಹುದ್ದೆಗಳಿಗೆ ಅರ್ಜಿಯ ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ ಮತ್ತು ಇತರೆ ಅಭ್ಯರ್ಥಿಗಳು 500/-ರೂ ಶುಲ್ಕವನ್ನು ಪಾವತಿಸಬೇಕು. ಅರ್ಜಿ ಶುಲ್ಕವನ್ನು ಫೆಬ್ರವರಿ 22,2019 ರೊಳಗೆ ಪಾವತಿಸಬಹುದು.

ಈ ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
MMTC recruitment 2019 notification has been released on official website for the recruitment of 26 vacancies at MMTC Limited. The candidate who is looking for Deputy Manager can apply online application from 30th January 2019 and before 20th February 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+