MRPL Recruitment 2022 : ಹಿರಿಯ ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್ (ಎಂಆರ್‌ಪಿಎಲ್‌) ನಲ್ಲಿ ಹಿರಿಯ ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ನವೆಂಬರ್ 16,2022 ರಿಂದ ಡಿಸೆಂಬರ್ 11,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

MRPL ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :

ಹಿರಿಯ ವ್ಯವಸ್ಥಾಪಕರು (ಭದ್ರತೆ)- 1 ಹುದ್ದೆ
ಹಿರಿಯ ವ್ಯವಸ್ಥಾಪಕರು (ವೈದ್ಯಕೀಯ ಸೇವೆಗಳು)- 1 ಹುದ್ದೆ
ಸಹಾಯಕ ವ್ಯವಸ್ಥಾಪಕರು (ವೈದ್ಯಕೀಯ ಸೇವೆಗಳು)- 1 ಹುದ್ದೆ

MRPL ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್ (ಎಂಆರ್‌ಪಿಎಲ್‌) ನೇಮಕಾತಿಯ ಹಿರಿಯ ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಪದವಿ ಮತ್ತು ಎಂಬಿಬಿಎಸ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

MRPL ನೇಮಕಾತಿ 2022 ವಯೋಮಿತಿ :

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್ (ಎಂಆರ್‌ಪಿಎಲ್‌) ನೇಮಕಾತಿಯ ಹಿರಿಯ ವ್ಯವಸ್ಥಾಪಕ ಹುದ್ದೆಗಳಿಗೆ ಗರಿಷ್ಟ 40 ವ‍ರ್ಷ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಗರಿಷ್ಟ 39 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

MRPL ನೇಮಕಾತಿ 2022 ವೇತನದ ವಿವರ :

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್ (ಎಂಆರ್‌ಪಿಎಲ್‌) ನೇಮಕಾತಿಯ ಹಿರಿಯ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 90,000/- ರಿಂದ 2,40,000/-ರೂ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 70,000/- ರಿಂದ 2,00,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

MRPL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್ (ಎಂಆರ್‌ಪಿಎಲ್‌) ನೇಮಕಾತಿಯ ಹಿರಿಯ ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

MRPL ನೇಮಕಾತಿ 2022 ಅರ್ಜಿ ಶುಲ್ಕ :

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್ (ಎಂಆರ್‌ಪಿಎಲ್‌) ನೇಮಕಾತಿಯ ಹಿರಿಯ ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 118/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕವಿನಾಯಿತಿಯನ್ನು ಹೊಂದಿರುತ್ತಾರೆ.

MRPL ನೇಮಕಾತಿ 2022 ಅರ್ಜಿ ಸಲ್ಲಿಕೆ :

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್ (ಎಂಆರ್‌ಪಿಎಲ್‌) ನೇಮಕಾತಿಯ ಹಿರಿಯ ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://mrpl.co.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ನವೆಂಬರ್ 16,2022 ರಿಂದ ಡಿಸೆಂಬರ್ 11,2022ರೊಳಗೆ ಅರ್ಜಿಯನ್ನು ಹಾಕಬಹುದು. ಆನ್‌ಲೈನ್ ಅರ್ಜಿ ಸಲ್ಲಿಸಿದ ಬಳಿಕ ಡಿಸೆಂಬರ್ 15,2022ರೊಳಗೆ ಅರ್ಜಿಯನ್ನು ಕಚೇರಿಗೆ ತಲುಪಿಸಬಹುದು.

ಕಚೇರಿ ವಿಳಾಸ :
Senior Manager (HR), Recruitment Section, Mangalore Refinery and Petrochemicals Limited, Kuthethoor Post, Mangalore-575030, Karnataka

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
MRPL recruitment 2022 notification has been released for senior manager and assistant manager Posts. Interested candidates can apply before December 11.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+