ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ: 15 ಆದೇಶ ಜಾರಿಕಾರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮೈಸೂರು ಘಟಕದಲ್ಲಿ ಖಾಲಿ ಇರುವ ಆದೇಶ ಜಾರಿಕಾರ ಹುದ್ದೆಗಳ ನೇಮಕಾತಿಗೆ ಪ್ರಕಟಣೆ ಹೊರಡಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್ ಲೈನ್ ನಲ್ಲಿ14.2.2019 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಅರ್ಹತೆ, ಸಂಬಳ ಮತ್ತು ಇನ್ನಿತರ ಮಾಹಿತಿಗಳನ್ನು ತಿಳಿಯಲು ಮುಂದಕ್ಕೆ ಓದಿ.

CRITERIA DETAILS
Name Of The Posts ಆದೇಶ ಜಾರಿಕಾರರು
Organisation ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
Educational Qualification 10 ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
Job Location ಮೈಸೂರು
Salary Scale ತಿಂಗಳಿಗೆ 19950/- ರಿಂದ 37900/- ರೂ
Industry ಜಿಲ್ಲಾ ನ್ಯಾಯಾಂಗ ಘಟಕ
Application Start Date January 15, 2019
Application End Date February 14, 2019

ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ಮೀಸಲಾತಿಯ ವಿವರ:

ReservationLadiesRuralEx servicemenPlanned Refugee CandidateKannada medium candidateTotal
Scheduled Caste - 01 - 01 - 02
Scheduled tribes 01 - - 01
Group -101 - - - 01
2A0101 - - 02
3B01 - - - 01
General040201 01 08
Total070501010115

ವಿದ್ಯಾರ್ಹತೆ:

10 ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.

ಗರಿಷ್ಠ ವಯೋಮಿತಿ:

General35 ವರ್ಷ
2A, 2B, 3A, 3B
38ವ‍ರ್ಷ
SC,ST, GROUP 140ವರ್ಷ

ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಗರಿಷ್ಠ ವಯಸ್ಸನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ:

ಈ ಕೆಳಗಿನ ಸಂದರ್ಭಗಳಲ್ಲಿ ನೇಮಕಾತಿಯ ಗರಿಷ್ಠ ವಯೋಮಿತಿಯನ್ನು ಆಯಾ ಅಭ್ಯರ್ಥಿಗಳಿಗೆ ನಮೂದಿಸಿರುವ ಮಟ್ಟಿಗೆ ಹೆಚ್ಚಿಸಲಾಗುವುದು.

1 ಅಭ್ಯರ್ಥಿಯು ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಅಥವಾ ಸ್ಥಳೀಯ ಪ್ರಾಧಿಕಾರದಲ್ಲಿ ಅಥವಾ ರಾಜ್ಯ ಅಧಿನಿಯಮ ಅಥವಾ ಕೇಂದ್ರ ಅಧಿನಿಯಮದ ಮೂಲಕ ಸ್ಥಾಪನೆಯಾದ ಅಥವಾ ರಾಜ್ಯ ಅಧಿನಿಯಮ ಅಥವಾ ಕೇಂದ್ರ ಅಧಿನಿಯಮದ ಮೂಲಕ ಸ್ಥಾಪನೆಗೊಂಡು ಕರ್ನಾಟಕ ರಾಜ್ಯ ಸರ್ಕಾರದ ಸ್ವಾಮ್ಯ ಅಥವಾ ನಿಯಂತ್ರಣದಲ್ಲಿರುವ ನಿಗಮದಲ್ಲಿ ಹುದ್ದೆ ಹೊಂದಿರುವ ಅಥವಾ ಹಿಂದೆ ಹೊಂದಿದ್ದಲ್ಲಿ ಗರಿಷ್ಠ ವಯೋಮಿತಿಯನ್ನು ಅವರು ಎಷ್ಟು ವರ್ಷಗಳ ಅವಧಿಗೆ ಹುದ್ದೆಯಲ್ಲಿ ಸೇವೆ ಸಲ್ಲಿಸಿರುವರೋ ಅಥವಾ ಹಿಂದೆ ಸಲ್ಲಿಸಿದ್ದರೋ ಅಷ್ಟು ವರ್ಷಗಳು ಅಥವಾ ೧೦ ವರ್ಷಗಳ ಅವಧಿ, ಎರಡರಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳ ಸಡಿಲಿಕೆಯನ್ನು ನೀಡಲಾಗುವುದು.

2 ಅಭ್ಯರ್ಥಿಯು ಮಾಜಿ ಸೈನಿಕನಾಗಿದ್ದಲ್ಲಿ, ಅವನು ಸಶಸ್ತ್ರ ದಳಗಳಲ್ಲಿ ಎಷ್ಟು ವರ್ಷ ಸೇವೆ ಸಲ್ಲಿಸಿರುವನೋ ಆ ವರ್ಷಗಳಿಗೆ ೦೩ ವರ್ಷಗಳನ್ನು ಸೇರಿಸಿದರೆ ಎಷ್ಟು ವರ್ಷಗಳಾಗುವುದೋ ಅಷ್ಟು ವರ್ಷಗಳು.

3ಅಭ್ಯರ್ಥಿಯು ಅಂಗವಿಕಲನಾಗಿದ್ದಲ್ಲಿ, ವಿಧವೆಯಾಗಿದ್ದಲ್ಲಿ ಮತ್ತು ಜೀತ ಕಾರ್ಮಿಕನಾಗಿದ್ದಲ್ಲಿ ೧೦ ವರ್ಷಗಳು

4ಅಭ್ಯರ್ಥಿಯು ಕರ್ನಾಟಕ ರಾಜ್ಯದಲ್ಲಿರುವ ಭಾರತ ಸರ್ಕಾರದ ಜನಗಣತಿ ಸಂಸ್ಥೆಯಲ್ಲಿ ಈಗ ಹುದ್ದೆಯನ್ನು ಹೊಂದಿದ್ದ ಪಕ್ಷದಲ್ಲಿ ಗರಿಷ್ಠ ವಯೋಮಿತಿಯನ್ನು ಅಭ್ಯರ್ಥಿಯು ಎಷ್ಟು ವರ್ಷಗಳ ಅವಧಿಗೆ ಆ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವರೋ ಅಥವಾ ಹಿಂದೆ ಸೇವೆ ಸಲ್ಲಿಸಿದ್ದಾರೋ ಅಷ್ಟು ವರ್ಷಗಳ ಅಥವಾ ೦೫ ವರ್ಷಗಳ ಅವಧಿ, ಅದರಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳು.

5 ಅಭ್ಯರ್ಥಿಯು ನ್ಯಾಷನಲ್ ಕೆಡೆಟ್ ಕಾರ್ಪ್ಸ್ ನಲ್ಲಿ ಪೂರ್ಣ ಕಾಲಿಕ ಪರೀಕ್ಷಕರಾಗಿ ಸೇವೆ ಸಲ್ಲಿಸಿ ಬಿಡುಗಡೆಯಾಗಿರುವ ವ್ಯಕ್ತಿಯಾಗಿದ್ದರೆ ಅಂತಹ ಕೆಡೆಟ್ ಪರೀಕ್ಷಕನಾಗಿ ಸೇವೆ ಸಲ್ಲಿಸಿದ್ದಷ್ಟು ವರ್ಷಗಳು

6 ಅಭ್ಯರ್ಥಿಯು ರಾಜ್ಯ ಸರ್ಕಾರದಿಂದ ಪುರಸ್ಕೃತವಾದ ಗ್ರಾಮೀಣ ಔದ್ಯಮೀಕರಣ ಯೋಜನೆಯ ಮೇರೆಗೆ ನೇಮಕಗೊಂಡು ಗ್ರಾಮಸಮೂಹ ಪರಿಶೀಲಕರಾಗಿ ಈಗ ಕೆಲಸ ಮಾಡುತ್ತಿದ್ದರೆ ಅಥವಾ ಹಿಂದೆ ಇದ್ದ ಪಕ್ಷದಲ್ಲಿ ಅಂತಹ ಗ್ರಾಮ ಸಮೂಹ ಪರಿಶೀಲಕರಾಗಿ ಸೇವೆ ಸಲ್ಲಿಸಿದ್ದಷ್ಟು ವರ್ಷಗಳು.

ಮಾಜಿ ಸೈನಿಕರು, ವಿಧವೆಯರು, ಅಂಗವಿಕಲರು ಮತ್ತು ಜೀತಕಾರ್ಮಿಕರು ಹಾಗೂ ವಯೋಮಿತಿ ರಿಯಾಯಿತಿಗೆ ಅರ್ಹರಾದ ಇನ್ನಿತರರು ವಯೋಮಿತಿ ರಿಯಾಯಿತಿ ಕೋರಲು ಸಕ್ಷಮ ಪ್ರಾಧಿಕಾರದಿಂದ ಪ್ರಮಾಣ ಪತ್ರವನ್ನು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದೊಳಗಾಗಿ ಪಡೆದಿಟ್ಟುಕೊಂಡಿರತಕ್ಕದ್ದು.


ಆಯ್ಕೆಯ ವಿಧಾನ:

ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ೦೧ ಹುದ್ದೆಗೆ ೨೫ ಅಭ್ಯರ್ಥಿಗಳಂತೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.


ನಿಗದಿತ ಅರ್ಜಿ ಶುಲ್ಕ ಹಾಗೂ ಪಾವತಿಸಬೇಕಾದ ವಿಧಾನ:

SC,ST,GROUP -1 and Handicapped Candidateಯಾವುದೇ ಶುಲ್ಕವಿಲ್ಲ
Group -2A, 2B, 3A, 3B Candidatesರೂ. 100/-
General Categoryರೂ. 200/-

ನಿಗದಿತ ಶುಲ್ಕವನ್ನು ನ್ಯಾಯಲಯದ ವೆಬ್ ಸೈಟ್ https://districts.ecourts.gov.in/mysuru-onlinerecruitment ರಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ State Bank Collect ಮೂಲಕ ಆನ್ ಲೈನ್ ನಲ್ಲಿ ನೆಟ್ ಬ್ಯಾಂಕಿಂಗ್/ ಡೆಬಿಟ್ / ಕ್ರೆಡಿಟ್/ ಚಲನ್ ಡೌನ್ ಲೋಡ್ ಸೌಲಭ್ಯದ ಮೂಲಕ ಪಾವತಿ ಮಾಡಬಹುದಾಗಿದೆ.

ಈ ರೀತಿ ನೆಟ್ ಬ್ಯಾಂಕಿಂಗ್/ ಡೆಬಿಟ್ / ಕ್ರೆಡಿಟ್/ ಚಲನ್ ಡೌನ್ ಲೋಡ್ ಸೌಲಭ್ಯದ ಮೂಲಕ ಶುಲ್ಕ ಪಾವತಿ ಮಾಡಲು ಇಚ್ಚಿಸದ ಆಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿನ್ಟ್ ಔಟ್ ಅನ್ನು ಪಡೆದುಕೊಂಡು ಎಸ್ .ಬಿ.ಐ ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸಬಹುದು.


ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆಯ ವಿವರ:

ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು 10ನೇ ತರಗತಿ/ ತತ್ಸಮಾನ ಪರೀಕ್ಷೆಯ ಅಂಕಗಳು ಮತ್ತು ಮೊಬೈಲ್ ನಂಬರ್ ಮತ್ತು ಈಮೇಲ್ ವಿಳಾಸವನ್ನು ನಮೂದಿಸತಕ್ಕದ್ದು , ಇತ್ತೀಚಿನ ನಿಮ್ಮ ಭಾವಚಿತ್ರಗಳನ್ನು ಅಪ್ ಲೋಡ್ ಮಾಡಬೇಕು.

ಆನ್ ಲೈನ್ ಹೊರತುಪಡಿಸಿ ಇತರೆ ಯಾವುದೇ ವಿಧಾನದಲ್ಲಿ ಕಳುಹಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಅರ್ಜಿಗಳನ್ನು ದಿನಾಂಕ 15.01.2019 ರಿಂದ ದಿನಾಂಕ 14.02.2019ರ ರಾತ್ರಿ 11.59ರವರೆಗೆ ಮಾತ್ರ ಸಲ್ಲಿಸತಕ್ಕದ್ದು. ಭಾರತೀಯ ಸ್ಟೇಟ್ ಬ್ಯಾಂಕ್ ಚಲನ್ ಮುಖಾಂತರ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂದ 17.02.2019 ಆಗಿರುತ್ತದೆ. ಅರ್ಜಿಗಳನ್ನು ಮೈಸೂರು ಜಿಲ್ಲಾ ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/mysuru-onlinerecruitment ಅಥವಾ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
District Court of Mysore has invited applications for the post of Order Enforcer. Candidates can apply application through online. People who are all interested to work . they may apply for this job.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X