ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ: 24 ಬೆರಳಚ್ಚುಗಾರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮೈಸೂರು ಘಟಕದಲ್ಲಿ ಖಾಲಿ ಇರುವ ಬೆರಳಚ್ಚುಗಾರ ಹುದ್ದೆಗಳ ನೇಮಕಾತಿಗೆ ಪ್ರಕಟಣೆ ಹೊರಡಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್ ಲೈನ್ ನಲ್ಲಿ18.2.2019 ರಿಂದ 20.3.2019 ರ ರಾತ್ರಿ 11:59ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಅರ್ಹತೆ, ಸಂಬಳ ಮತ್ತು ಇನ್ನಿತರ ಮಾಹಿತಿಗಳನ್ನು ತಿಳಿಯಲು ಮುಂದಕ್ಕೆ ಓದಿ.

ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಬೆರಳಚ್ಚುಗಾರ
Organisation ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
Educational Qualification ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ವಿದ್ಯಾರ್ಹತೆ
Job Location ಮೈಸೂರು
Salary Scale ತಿಂಗಳಿಗೆ 21,400/- ರಿಂದ42,000/- ರೂ
Application Start Date February 18, 2019
Application End Date March 20, 2019

ವಿದ್ಯಾರ್ಹತೆ:

ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆ ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಕಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಯಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯನ್ನು ಅಧಿಸೂಚನೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.

ಹುದ್ದೆಗಳ ಮೀಸಲಾತಿಯ ವಿವರ:

ಮೀಸಲಾತಿಇತರೆಕ.ಮಾ.ಅಮಹಿಳೆಗ್ರಾಮೀಣ ಅಂಗವಿಕಲಯೋ.ನಿ ಮಾಜಿ ಸೈನಿಕ ಒಟ್ಟು
ಪರಿಶಿಷ್ಟ ಜಾತಿ 020101* 04
ಪರಿಶಿಷ್ಟ ಪಂಗಡ 01 01
ಪ್ರವರ್ಗ-101 01
ಪ್ರವರ್ಗ-2A01 010101* 04
ಪ್ರವರ್ಗ-3A 01 01
ಪ್ರವರ್ಗ-3B 01 01
ಸಾಮಾನ್ಯ02010403 010112
ಒಟ್ಟು0401080702010124

* ದೃಷ್ಟಿಮಾಂದ್ಯ/ ದೃಷ್ಟಿದೋಷವುಳ್ಳ ಅಭ್ಯರ್ಥಿಗಳು

ವಯೋಮಿತಿ:

ಈ ಹುದ್ದೆಗಳಿಗೆ ಅಭ್ಯರ್ಥಿಗಳು ಈ ಅಧಿಸೂಚನೆಯಲ್ಲಿ ಹೊರಡಿಸಿದ ದಿನಾಂಕದಂದು ಕನಿಷ್ಟ 18ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.

ಗರಿಷ್ಟ ವಯೋಮಿತಿ:

ಸಾಮಾನ್ಯ ವರ್ಗ35ವರ್ಷ
2A,2B,3A,3B ಅಭ್ಯರ್ಥಿಗಳು38ವರ್ಷ
ಪ.ಜಾತಿ, ಪ.ಪಂಗಡ, ಪ್ರವರ್ಗ-140ವರ್ಷ

ಅಭ್ಯರ್ಥಿಗಳು ಈ ಅಧಿಸೂಚನೆಯ ದಿನಾಂಕದಂದು ಗರಿಷ್ಠ ವಯಸ್ಸನ್ನು ಮೀರಿರಕೂಡದು ಮತ್ತು ಸರಕಾರಿ ಸೇವೆಯಲ್ಲಿರುವವರೆಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ವೇತನದ ವಿವರ:

ಬೆರಳಚ್ಚುಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ42,000/- ರೂ ಹಾಗೂ ಇತರೆ ಭತ್ಯೆಗಳನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ:

ಬೆರಳಚ್ಚುಗಾರರು ಹುದ್ದೆಗಳಿಗೆ 15 ನಿಮಿಷಗಳ ಉಕ್ತಲೇಖನವನ್ನು ಬೆರಳಚ್ಚುಪಡಿಸುವ ಅರ್ಹತಾ ಪರೀಕ್ಷೆಯನ್ನು ನಡೆಸಲಾಗುವುದು.
ಬೆರಳಚ್ಚುಗಾರರ ಹುದ್ದೆಗೆ 1:5ರ ಅನುಪಾತದಲ್ಲಿ, ನಿಗಧಿಪಡಿಸಿದ ವಿದ್ಯಾರ್ಹತೆಗೆ ಅನುಗುಣವಾಗಿ, ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಯ್ಕೆ ಮಾಡಲಾಗುವುದು, ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಹಾಜರಾಗುವುದು.

ಹುದ್ದೆಗಳಿಗೆ ಪಾವತಿಸಬೇಕಾದ ನಿಗದಿತ ಶುಲ್ಕ ಹಾಗೂ ವಿಧಾನ:

ಪ್ರವರ್ಗ- 2A, 2B,3A,3B ಅಭ್ಯರ್ಥಿಗಳಿಗೆ -100/-ರೂ
ಸಾಮಾನ್ಯ ವರ್ಗ -200/-ರೂ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಇರುತ್ತದೆ.

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/mysuru-onlinerecruitment ಅಥವಾ http://karnatakajudiciary.kar.nic.in/districtrecruitment.asp ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಟೇಟ್ ಬ್ಯಾಂಕ್ ಕಲೆಕ್ಟ್ ಮೂಲಕ ನೆಟ್ ಬ್ಯಾಂಕಿಂಗ್/ ಕ್ರೆಡಿಕ್ಟ್ ಕಾರ್ಡ್/ಡೆಬಿಟ್ ಕಾರ್ಡ್/ಚಲನ್ ಅನ್ನು ಡೌನ್ ಲೋಡ್ ಮಾಡುವ ಸೌಲಭ್ಯದ ಮೂಲಕ ಶುಲ್ಕವನ್ನು ಪಾವತಿಸತಕ್ಕದ್ದು. ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ' ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ ಡಿಮ್ಯಾಂಡ್ ಡ್ರಾಫ್ಟ್ / ಪೋಸ್ಟಲ್ ಆರ್ಡರ್/ ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ಶುಲ್ಕ ಪಾವತಿಸದ ಅಭ್ಯರ್ಥಿಗಳನ್ನು ತಿರಸ್ಕರಿಸಲಾಗುವುದು. ಹಾಗೂ ಅರ್ಜಿ ಶುಲ್ಕವನ್ನು ಮಾರ್ಚ್ 23,2019 ರೊಳಗೆ ಪಾವತಿಸಬೇಕು.

ಈ ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
District Court of Mysore has invited applications for 24 Typist Posts. Interested candidates can apply through online from 18th february 2019 to 20th march 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+