ಮೈಸೂರು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಶೀಘ್ರಲಿಪಿಗಾರ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ 07 ಶೀಘ್ರಲಿಪಿಗಾರ ಹುದ್ದೆಗಳನ್ನು ನೇರನೇಮಕಾತಿ ಮೂಲದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಮೈಸೂರು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಶೀಘ್ರಲಿಪಿಗಾರ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿಗಳನ್ನು ಮೈಸೂರು ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್‌ಗೆ ಲಾಗಿನ್ ಆಗಿ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಪ್ರಕ್ರಿಯೆ ಎಪ್ರಿಲ್ 2, 20 18 ರಿಂದ ಪ್ರಾರಂಭವಾಗಿ, ಮೇ 2, 2018 ಅರ್ಜಿ

ಸಲ್ಲಿಕೆಗೆ ಕೊನೆಯ ದಿನಾಂಕ. ಅರ್ಜಿ ಶುಲ್ಕ ಪಾವತಿಸಲು ಮೇ 5, 2018 ಕೊನೆಯ ದಿನಾಂಕ.

ಹುದ್ದೆಯ ಕಂಪ್ಲೀಟ್ ಡೀಟೆಲ್ಸ್ ಹೀಗಿದೆ

ವರ್ಗ

ಡೀಟೆಲ್ಸ

ಹುದ್ದೆ ಶೀಘ್ರಲಿಪಿಗಾರ
ಹುದ್ದೆ ಸಂಖ್ಯೆ 07
ವೇತನ ಶ್ರೇಣಿ 26,700

ಶೈಕ್ಷಣಿಕ ವಿದ್ಯಾರ್ಹತೆ ಹೀಗಿದೆ:

  • ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
  • ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಪರೀಕ್ಷೆಯಲ್ಲಿ ಪಾಸಾಗಿರಬೇಕು
  • ಕಚೇರಿ ಕಾರ್ಯ ಕಲಾಪಗಳಿಗೆ ಸಂಬಂಧಿಸಿದಂತೆ ಕಂಪ್ಯೂಟರ್ ಬಳಕೆ ಜ್ಞಾನ ಅವಶ್ಯಕವಾಗಿರುತ್ತದೆ

ವಯೋಮಿತಿ:

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ಪೂರೈಸಿರಬೇಕು

ಗರಿಷ್ಟ ವಯೋಮಿತಿ ಹೀಗಿದೆ

ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ
ಪ.ಜಾತಿ, ಪ.ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿ 40 ವರ್ಷ

ಅರ್ಜಿ ಶುಲ್ಕ :

ಪ.ಜಾತಿ, ಪ.ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿ,ವಿಕಲಚೇತನ ಯಾವುದೇ ಶುಲ್ಕವಿಲ್ಲ
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ರೂ 100
ಸಾಮಾನ್ಯ ವರ್ಗ ರೂ. 200

ಅಭ್ಯರ್ಥಿಯು ಆನ್‌ಲೈನ್‌ ಅರ್ಜಿಯಲ್ಲಿ ಕೋರಲಾದ ಎಲ್ಲಾ ಮಾಹಿತಿಗಳನ್ನೂ ಭರ್ತಿ ಮಾಡಿ ನಿಗದಿತ ಶುಲ್ಕ ಪಾವತಿಸಲು ಅಧಿಸೂಚನೆಯಲ್ಲಿ ತಿಳಿಸಿರುವಂತೆ ಕ್ರಮಕೈಗೊಳ್ಳಲಾಗುವುದು. ತದನಂತರ ಭರ್ತಿ ಮಾಡಿದ ಅರ್ಜಿ ಹಾಗೂ ಶುಲ್ಕ ಪಾವತಿಸಿದ ಪ್ರತಿಯನ್ನ ಡೌನ್‌ಲೋಡ್ ಮಾಡಿಕೊಂಡು, ನೇಮಕಾತಿ ಪ್ರಕ್ರಿಯೆ ಮುಗಿಯುವವರೆಗೂ ತಮ್ಮ ಹತ್ತಿರ ಕಾಯ್ದಿರಿಸಿಕೊಳ್ಳಿ. ಸಂದರ್ಶನದ ವೇಳೆ ಹಾಜರುಪಡಿಸಿ.

ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿಗೆ ಮೈಸೂರು ಜಿಲ್ಲಾ ನ್ಯಾಯಾಲಯದ ಆಫೀಶಿಯಲ್ ವೆಬ್‌ಸೈಟ್‌ಗೆ ಭೇಟಿ ನೀಡಿ

More News  

For Quick Alerts
ALLOW NOTIFICATIONS  
For Daily Alerts

English summary
Mysore District Court has released an employment notification calling for the recruitment of Stenographer vacancies. interested Candidates can apply
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+