ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮೈಸೂರು ಘಟಕದಲ್ಲಿ ಖಾಲಿ ಇರುವ 17 ಆದೇಶ ಜಾರಿಕಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 1,2020 ರಿಂದ ಏಪ್ರಿಲ್ 30,2020 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ಸಂಬಳ ಮತ್ತು ಇನ್ನಿತರೆ ಮಾಹಿತಿಗಳನ್ನು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಆದೇಶ ಜಾರಿಕಾರ |
| Organisation | ಜಿಲ್ಲಾ ನ್ಯಾಯಾಂಗ ಘಟಕ |
| Educational Qualification | ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ |
| Job Location | ಮೈಸೂರು ಜಿಲ್ಲೆ (ಕರ್ನಾಟಕ) |
| Salary Scale | ತಿಂಗಳಿಗೆ 19,950/- ರಿಂದ 37,900/-ರೂ |
| Application Start Date | April 1, 2020 |
| Application End Date | April 30, 2020 |
ವಿದ್ಯಾರ್ಹತೆ:
ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ಏಪ್ರಿಲ್ 30,2020ರ ಅನ್ವಯ ಕನಿಷ್ಠ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ್ರವರ್ಗ-2ಎ,2ಬಿ, 3ಎ,3ಬಿ ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.
ವೇತನದ ವಿವರ:
ಆದೇಶ ಜಾರಿಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,950/- ರಿಂದ 37,900/-ರೂ ಮತ್ತು ಇತರೆ ಭತ್ಯೆಗಳನ್ನು ನೀಡಲಾಗುವುದು.
ಆಯ್ಕೆ ವಿಧಾನ:
ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 25ಅಭ್ಯರ್ಥಿಗಳಂತೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಸಂದರ್ಶನವು 10 ಅಂಕಗಳನ್ನೊಳಗೊಂಡಿರುತ್ತದೆ. ಚಾಲನಾ ಪರವಾನಗಿ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ನಿಗದಿತ ಶುಲ್ಕ ಹಾಗೂ ಪಾವತಿಸುವ ವಿಧಾನ:
| ಸಾಮಾನ್ಯ ವರ್ಗ | 300/-ರೂ |
| ಪ್ರವರ್ಗ- 2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ | 150/-ರೂ |
| ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ | ಯಾವುದೇ ಶುಲ್ಕವಿಲ್ಲ |
ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಟೇಟ್ ಬ್ಯಾಂಕ್ ಕಲೆಕ್ಟ್ ಮೂಲಕ ನೆಟ್ ಬ್ಯಾಂಕಿಂಗ್/ ಕ್ರೆಡಿಕ್ಟ್ ಕಾರ್ಡ್/ಡೆಬಿಟ್ ಕಾರ್ಡ್/ಚಲನ್ ಅನ್ನು ಡೌನ್ ಲೋಡ್ ಮಾಡುವ ಸೌಲಭ್ಯದ ಮೂಲಕ ಪಾವತಿ ಮಾಡಬಹುದಾಗಿದೆ.
ಈ ರೀತಿ ನೆಟ್ ಬ್ಯಾಂಕಿಂಗ್/ಕ್ರೆಡಿಟ್ ಕಾರ್ಡ್/ಡೆಬಿಟ್ ಕಾರ್ಡ್/ಚಲನ್ ಡೌನ್‌ಲೋಡ್ ಸೌಲಭ್ಯದ ಮೂಲಕ ಶುಲ್ಕ ಪಾವತಿ ಮಾಡಲು ಇಚ್ಚಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ ನ ಯಾವುದೇ ಶಾಖೆಗೆ ಹಾಜರುಪಡಿಸಿ ಮೇ 4.2020ರೊಳಗೆ ಶುಲ್ಕವನ್ನು ಪಾವತಿಸತಕ್ಕದ್ದು.
ಆನ್‌ಲೈನ್ ಮುಖಾಂತರ ಪಾವತಿಸುವುದನ್ನು ಹೊರತುಪಡಿಸಿ ಯಾವುದೇ ಆನ್‌ಲೈನ್ ಚಲನ್, ಡಿಮ್ಯಾಂಡ್ ಡ್ರಾಫ್ಟ್ / ಪೋಸ್ಟಲ್ ಆರ್ಡರ್/ ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ಅರ್ಜಿ ಶುಲ್ಕ ಪಾವತಿಸದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಮೈಸೂರು ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ https://districts.ecourts.gov.in/mysuru ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಏಪ್ರಿಲ್ 30,2020ರ ರಾತ್ರಿ 11:59 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











