ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ 4 ಬೆರಳಚ್ಚು-ನಕಲುಗಾರ ಹುದ್ದೆಗಳ ನೇಮಕಾತಿ

ಮೈಸೂರು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ 4 ಬೆರಳಚ್ಚು-ನಕಲುಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 21,2020 ರಿಂದ ಏಪ್ರಿಲ್ 20,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ಸಂಬಳ ಮತ್ತು ಇನ್ನಿತರೆ ಮಾಹಿತಿಗಳನ್ನು ತಿಳಿಯಲು ಮುಂದೆ ಓದಿ.

ಬೆರಳಚ್ಚು-ನಕಲುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ..ಏ.20 ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಬೆರಳಚ್ಚು-ನಕಲುಗಾರ
Organisation ಜಿಲ್ಲಾ ನ್ಯಾಯಾಂಗ ಘಟಕ
Educational Qualification ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ
Job Location ಮೈಸೂರು ಜಿಲ್ಲೆ (ಕರ್ನಾಟಕ)
Salary Scale ತಿಂಗಳಿಗೆ 21,400/- ರಿಂದ 42,000/-ರೂ
Application Start Date March 21, 2020
Application End Date April 20, 2020

ವಿದ್ಯಾರ್ಹತೆ:

ಬೆರಳಚ್ಚು-ನಕಲುಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಅಭ್ಯರ್ಥಿಯು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಕಿರಿಯ ಶ್ರೇಣಿ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು.

ವಯೋಮಿತಿ:

ಏಪ್ರಿಲ್ 20,2020ರ ಅನ್ವಯ ಕನಿಷ್ಠ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ್ರವರ್ಗ-2ಎ,2ಬಿ, 3ಎ,3ಬಿ ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ವೇತನದ ವಿವರ:

ಬೆರಳಚ್ಚು-ನಕಲುಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 42,000/-ರೂ ಮತ್ತು ಇತರೆ ಭತ್ಯೆಗಳನ್ನು ನೀಡಲಾಗುವುದು.

ಆಯ್ಕೆ ವಿಧಾನ:

ಬೆರಳಚ್ಚು-ನಕಲುಗಾರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಅಂಕಗಳ ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನದಲ್ಲಿ ಕೊಡುವ ವಿಷಯವನ್ನು ಬೆರಳಚ್ಚು ಯಂತ್ರ ಅಥವಾ ಕಂಪ್ಯೂಟರ್ ನಲ್ಲಿ ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಶೇಕಡಾವಾರು ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ನಿಗದಿತ ಶುಲ್ಕ ಹಾಗೂ ಪಾವತಿಸುವ ವಿಧಾನ:

ಸಾಮಾನ್ಯ ವರ್ಗ300/-ರೂ
ಪ್ರವರ್ಗ- 2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ150/-ರೂ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆಯಾವುದೇ ಶುಲ್ಕವಿಲ್ಲ

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಟೇಟ್ ಬ್ಯಾಂಕ್ ಕಲೆಕ್ಟ್ ಮೂಲಕ ನೆಟ್ ಬ್ಯಾಂಕಿಂಗ್/ ಕ್ರೆಡಿಕ್ಟ್ ಕಾರ್ಡ್/ಡೆಬಿಟ್ ಕಾರ್ಡ್/ಚಲನ್ ಅನ್ನು ಡೌನ್ ಲೋಡ್ ಮಾಡುವ ಸೌಲಭ್ಯದ ಮೂಲಕ ಪಾವತಿ ಮಾಡಬಹುದಾಗಿದೆ.

ಈ ರೀತಿ ನೆಟ್‌ ಬ್ಯಾಂಕಿಂಗ್/ಕ್ರೆಡಿಟ್ ಕಾರ್ಡ್/ಡೆಬಿಟ್ ಕಾರ್ಡ್/ಚಲನ್ ಡೌನ್‌ಲೋಡ್ ಸೌಲಭ್ಯದ ಮೂಲಕ ಶುಲ್ಕ ಪಾವತಿ ಮಾಡಲು ಇಚ್ಚಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್‌.ಬಿ.ಐ ನ ಯಾವುದೇ ಶಾಖೆಗೆ ಹಾಜರುಪಡಿಸಿ ಏಪ್ರಿಲ್ 24.2020ರೊಳಗೆ ಶುಲ್ಕವನ್ನು ಪಾವತಿಸತಕ್ಕದ್ದು.

ಆನ್‌ಲೈನ್ ಮುಖಾಂತರ ಪಾವತಿಸುವುದನ್ನು ಹೊರತುಪಡಿಸಿ ಯಾವುದೇ ಆನ್‌ಲೈನ್ ಚಲನ್, ಡಿಮ್ಯಾಂಡ್ ಡ್ರಾಫ್ಟ್ / ಪೋಸ್ಟಲ್ ಆರ್ಡರ್/ ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ಅರ್ಜಿ ಶುಲ್ಕ ಪಾವತಿಸದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಮೈಸೂರು ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ https://districts.ecourts.gov.in/mysuru ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಏಪ್ರಿಲ್ 20,2020ರ ರಾತ್ರಿ 11:59 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
District court of mysuru recruitment 2020 notification has been released on official website for the recruitment of 4 typist-copiest posts. Interested candidates can apply through online before 20th April 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+