ನ್ಯಾಷನಲ್ ಅಸೆಸ್ಮೆಂಟ್ ಅಂಡ್ ಅಕ್ರಿಡಿಟೇಷನ್ ಕೌನ್ಸಿಲ್ (NAAC)ನಲ್ಲಿ 2 ಉಪ ಸಲಹೆಗಾರ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ನವೆಂಬರ್ 13ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿ ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಉಪ ಸಲಹೆಗಾರ |
| Organisation | ನ್ಯಾಷನಲ್ ಅಸೆಸ್ಮೆಂಟ್ ಅಂಡ್ ಅಕ್ರಿಡಿಟೇಷನ್ ಕೌನ್ಸಿಲ್ (NAAC) |
| Educational Qualification | ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ |
| Job Location | ಬೆಂಗಳೂರು (ಕರ್ನಾಟಕ) |
| Salary Scale | ತಿಂಗಳಿಗೆ 37,000/- ರಿಂದ 67,000/-ರೂ |
| Application Start Date | October 12, 2019 |
| Application End Date | November 13, 2019 |
ವಿದ್ಯಾರ್ಹತೆ:
ನ್ಯಾಷನಲ್ ಅಸೆಸ್ಮೆಂಟ್ ಅಂಡ್ ಅಕ್ರಿಡಿಟೇಷನ್ ಕೌನ್ಸಿಲ್ (NAAC)ನ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.
ವಯೋಮಿತಿ:
ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.
ವೇತನದ ವಿವರ:
ಉಪ ಸಲಹೆಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,000/- ರಿಂದ 67,000/-ರೂ ವೇತವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ :
ಉಪ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ನ್ಯಾಷನಲ್ ಅಸೆಸ್ಮೆಂಟ್ ಅಂಡ್ ಅಕ್ರಿಡಿಟೇಷನ್ ಕೌನ್ಸಿಲ್ (NAAC)ನ ಅಧಿಕೃತ ವೆಬ್‌ಸೈಟ್ http://naac.gov.in/ ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 13,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











