NABARD Recruitment 2019 : 91 ಅಭಿವೃದ್ಧಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಿ

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್)ನಲ್ಲಿ ಖಾಲಿ ಇರುವ 91 ಅಭಿವೃದ್ಧಿ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಂದಿನಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ನಬಾರ್ಡ್‌ನಲ್ಲಿ 91 ಹುದ್ದೆಗಳ ನೇಮಕಾತಿ : ಇಂದಿನಿಂದ ಆನ್‌ಲೈನ್‌ ಅರ್ಜಿ ಸಲ್ಲಿಕೆ ಆರಂಭ

ಭಾರತದಾದ್ಯಂತ ಗ್ರಾಮೀಣಾಭಿವೃದ್ಧಿ ಬ್ಯಾಂಕಿಂಗ್ ಸೇವೆ (RDBS)ಯ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸಲು ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಕ್ಟೋಬರ್ 2,2019 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಶೈಕ್ಷಣಿಕ ವಿದ್ಯಾರ್ಹತೆ ಏನಿರಬೇಕು ? :

ಶೈಕ್ಷಣಿಕ ವಿದ್ಯಾರ್ಹತೆ ಏನಿರಬೇಕು ? :

ಅಭಿವೃದ್ಧಿ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗ್ರಾಜುಯೇಟ್ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆಯಿಂದ ಶೇ.50%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

ಖಾಲಿ ಹುದ್ದೆಗಳ ವಿವರ :

ಖಾಲಿ ಹುದ್ದೆಗಳ ವಿವರ :

ಅಭಿವೃದ್ಧಿ ಸಹಾಯಕ : 82 ಹುದ್ದೆಗಳು

ಅಭಿವೃದ್ಧಿ ಸಹಾಯಕ (ಹಿಂದಿ) - 9 ಹುದ್ದೆಗಳು

ವಯೋಮಿತಿ ಎಷ್ಟಿರಬೇಕು ? :

ವಯೋಮಿತಿ ಎಷ್ಟಿರಬೇಕು ? :

ಈ ಹುದ್ದೆಗಳಿಗೆ ಸೆಪ್ಟೆಂಬರ್ 1,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನವೆಷ್ಟು ನೀಡಲಾಗುವುದು ? :

ವೇತನವೆಷ್ಟು ನೀಡಲಾಗುವುದು ? :

ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 32,000/-ರೂ ವೇತವನ್ನು ನೀಡಲಾಗುವುದು.

ಪ್ರಮುಖ ದಿನಾಂಕಗಳು :

ಪ್ರಮುಖ ದಿನಾಂಕಗಳು :

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭ : ಸೆಪ್ಟೆಂಬರ್ 14,2019

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 2,2019

ಆಯ್ಕೆ ಪ್ರಕ್ರಿಯೆ :

ಆಯ್ಕೆ ಪ್ರಕ್ರಿಯೆ :

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆ ಮತ್ತು ಪ್ರಮುಖ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ ಎಷ್ಟು ? :

ಅರ್ಜಿ ಶುಲ್ಕ ಎಷ್ಟು ? :

 

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 450/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ / ಮಾಜಿ ಸೈನಿಕ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನ ಅಧಿಕೃತ ವೆಬ್‌ಸೈಟ್‌ https://www.nabard.org/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 2,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
NABARD recruitment 2019 notification has been released on official website for the recruitment of 91 development assistant posts.Interested candidates can apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+