NABARD Recruitment 2020: 154 ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನಲ್ಲಿ 154 ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಭಾರತದಾದ್ಯಂತ ಗ್ರಾಮೀಣಾಭಿವೃದ್ಧಿ ಬ್ಯಾಂಕಿಂಗ್ ಸೇವೆ (RDBS)ಯ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸಲು ಆಸಕ್ತರಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅದಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ನಬಾರ್ಡ್‌ನಲ್ಲಿ 154 ಸಹಾಯಕ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿ

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 31,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಶೈಕ್ಷಣಿಕ ವಿದ್ಯಾರ್ಹತೆ ಏನಿರಬೇಕು ?:

ಶೈಕ್ಷಣಿಕ ವಿದ್ಯಾರ್ಹತೆ ಏನಿರಬೇಕು ?:

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್‌/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ ಎಷ್ಟಿರಬೇಕು ?:

ವಯೋಮಿತಿ ಎಷ್ಟಿರಬೇಕು ?:

ನಬಾರ್ಡ್ 154 ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಈ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನವೆಷ್ಟು ?:
 

ವೇತನವೆಷ್ಟು ?:

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 28,150/- ರಿಂದ 55,600/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ ಮತ್ತು ಆಯ್ಕೆ ಪ್ರಕ್ರಿಯೆ:

ಅರ್ಜಿ ಶುಲ್ಕ ಮತ್ತು ಆಯ್ಕೆ ಪ್ರಕ್ರಿಯೆ:

ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ಬಗೆಗೆ ತಿಳಿಯಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದು ಹಾಗೂ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಕೆ ಮತ್ತು ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಮತ್ತು ಪ್ರಮುಖ ದಿನಾಂಕಗಳು:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನ ಅಧಿಕೃತ ವೆಬ್‌ಸೈಟ್‌ https://www.nabard.org/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 31,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು:

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಜನವರಿ 10,2020

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 31,2020

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ನಬಾರ್ಡ್‌ನಲ್ಲಿ 154 ಸಹಾಯಕ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿ
For Quick Alerts
ALLOW NOTIFICATIONS  
For Daily Alerts

English summary
Nabard recruitment 2019 notification has been released on official website for the recruitment of 154 assistant manager posts. Interested candidates can apply through online before 31st January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X