NABCONS Recruitment 2019: 10 ಸಲಹೆಗಾರ ಹುದ್ದೆಗಳಿಗೆ ಅರ್ಜಿ ಅಹ್ವಾನ

ನಬಾರ್ಡ್ ಕನ್ಸಲ್ಟೆನ್ಸಿ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ (ನಬಕಾನ್ಸ್) 10 ಕಿರಿಯ ಮತ್ತು ಹಿರಿಯ ಮಟ್ಟದ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 6,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ನಬಕಾನ್ಸ್ ನಲ್ಲಿ10 ಸಲಹೆಗಾರ ಹುದ್ದೆಗಳ ನೇಮಕಾತಿ

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗ್ರಾಜುಯೇಟ್ ಅನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆಯಿಂದ ಶೇ.55%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

ಖಾಲಿ ಹುದ್ದೆಗಳ ವಿವರ:

ಹಿರಿಯ ಮಟ್ಟದ ಸಲಹೆಗಾರ: 1 ಹುದ್ದೆ

ಕಿರಿಯ ಮಟ್ಟದ ಸಲಹೆಗಾರ: 9 ಹುದ್ದೆಗಳು

ವಯೋಮಿತಿಯ ವಿವರ:

ಕನಿಷ್ಟ 24 ರಿಂದ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಕಿರಿಯ ಮಟ್ಟದ ಸಲಹೆಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/- ರಿಂದ 45,000/-ರೂ ಮತ್ತು ಹಿರಿಯ ಮಟ್ಟದ ಸಲಹೆಗಾರ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 55,000/- ರಿಂದ 65,000/-ರೂ
ವೇತವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು:

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭ: ನವೆಂಬರ್ 27,2019

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 6,2019

ಅರ್ಜಿ ಶುಲ್ಕದ ವಿವರ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಸಲಹೆಗಾರ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನಬಾರ್ಡ್ ಕನ್ಸಲ್ಟೆನ್ಸಿ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ (ನಬಕಾನ್ಸ್)ನ ಅಧಿಕೃತ ವೆಬ್‌ಸೈಟ್‌ http://www.nabcons.com/ ಗೆ ಹೋಗಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 6,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Nabard consultancy services private limited (NABCONS) recruitment notification has been released for the recruitment of 10 consultant posts. Interested candidates can apply through online before 6th december 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X