ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ಇಲ್ಲಿ 41 ಪ್ರಾಜೆಕ್ಟ್ ಅಸಿಸ್ಟೆಂಟ್, ಪ್ರಾಜೆಕ್ಟ್ ಅಸೋಸಿಯೇಟ್ - I ಮತ್ತು ಪ್ರಾಜೆಕ್ಟ್ ಅಸೋಸಿಯೇಟ್ - II ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 24,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಲು ಮುಂದೆ ಓದಿ.

ಹುದ್ದೆಗಳ ವಿವರ:
ಪ್ರಾಜೆಕ್ಟ್ ಅಸಿಸ್ಟೆಂಟ್ - 5 ಹುದ್ದೆಗಳು
ಪ್ರಾಜೆಕ್ಟ್ ಅಸೋಸಿಯೇಟ್ - I - 18 ಹುದ್ದೆಗಳು
ಪ್ರಾಜೆಕ್ಟ್ ಅಸೋಸಿಯೇಟ್ - II - 18 ಹುದ್ದೆಗಳು
ಒಟ್ಟು 41 ಹುದ್ದೆಗಳು
ವಿದ್ಯಾರ್ಹತೆ:
ಮೆಕ್ಯಾನಿಕಲ್/ಇಲೆಕ್ಟ್ರಾನಿಕ್ಸ್/ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್/ ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ನಲ್ಲಿ ಡಿಪ್ಲೋಮಾ ಮತ್ತು ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಗರಿಷ್ಟ 50 ವರ್ಷ ಹಾಗೂ ಪ್ರಾಜೆಕ್ಟ್ ಅಸೋಸಿಯೇಟ್ - I ಮತ್ತು II ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/-ರೂ, ಪ್ರಾಜೆಕ್ಟ್ ಅಸೋಸಿಯೇಟ್ -I ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,000/-ರೂ ಮತ್ತು ಪ್ರಾಜೆಕ್ಟ್ ಅಸೋಸಿಯೇಟ್-II ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.nal.res.in/en ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 24,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











