NALCO Recruitment 2022 : 39 ಉಪ ವ್ಯವಸ್ಥಾಪಕ ಮತ್ತು ಸಹಾಯಕ ಮುಖ್ಯ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನಲ್ಲಿ 39 ಉಪ ವ್ಯವಸ್ಥಾಪಕ ಮತ್ತು ಸಹಾಯಕ ಮುಖ್ಯ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 11,2022 ರಿಂದ ಡಿಸೆಂಬರ್ 10,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

NALCO ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :

ಉಪ ವ್ಯವಸ್ಥಾಪಕರು (HRD) - 10 ಹುದ್ದೆಗಳು
ಸಹಾಯಕ ಜನರಲ್ ಮ್ಯಾನೇಜರ್ (ಪರಿಸರ) - 1 ಹುದ್ದೆ
ಸಹಾಯಕ ಜನರಲ್ ಮ್ಯಾನೇಜರ್ (ಮೆಕ್ಯಾನಿಕಲ್) - 1 ಹುದ್ದೆ
ಸಹಾಯಕ ಜನರಲ್ ಮ್ಯಾನೇಜರ್ (ರವಾನೆ) - 1 ಹುದ್ದೆ
ಸಹಾಯಕ ಜನರಲ್ ಮ್ಯಾನೇಜರ್ (E&I) - 1 ಹುದ್ದೆ
ಉಪ ವ್ಯವಸ್ಥಾಪಕರು (ವಕ್ರೀಭವನ) - 3 ಹುದ್ದೆಗಳು
ಉಪ ವ್ಯವಸ್ಥಾಪಕರು (ಹಣಕಾಸು) - 4 ಹುದ್ದೆಗಳು
ಉಪ ವ್ಯವಸ್ಥಾಪಕರು (ಸುರಕ್ಷತೆ) - 3 ಹುದ್ದೆಗಳು
ಸಹಾಯಕ ಜನರಲ್ ಮ್ಯಾನೇಜರ್ (ಸುರಕ್ಷತೆ) - 1 ಹುದ್ದೆ
ಉಪ ವ್ಯವಸ್ಥಾಪಕರು (ಸಿಸ್ಟಮ್) - 1 ಹುದ್ದೆ
ಉಪ ವ್ಯವಸ್ಥಾಪಕರು (ಭೂವಿಜ್ಞಾನ) - 1 ಹುದ್ದೆ
ಸಹಾಯಕ ಜನರಲ್ ಮ್ಯಾನೇಜರ್ (ಭೂವಿಜ್ಞಾನ) - 1 ಹುದ್ದೆ
ಉಪ ವ್ಯವಸ್ಥಾಪಕರು (ಸಮೀಕ್ಷೆ) - 1 ಹುದ್ದೆ
ಉಪ ವ್ಯವಸ್ಥಾಪಕರು (ವಸ್ತುಗಳು) - 6 ಹುದ್ದೆಗಳು
ಉಪ ವ್ಯವಸ್ಥಾಪಕರು (ತೋಟಗಾರಿಕೆ) - 4 ಹುದ್ದೆಗಳು
ಒಟ್ಟು 39 ಹುದ್ದೆಗಳು

NALCO ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನೇಮಕಾತಿಯ ಉಪ ವ್ಯವಸ್ಥಾಪಕ ಮತ್ತು ಸಹಾಯಕ ಮುಖ್ಯ ವ್ಯವಸ್ಥಾಪಕ ಹುದ್ದೆಗಳಿಗೆ ಪದವಿ, ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮಾ, ಎಂಬಿಎ, ಇಂಜಿನಿಯರಿಂಗ್ ಪದವಿ, ಎಂ.ಇ/ಎಂ.ಟೆಕ್, ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

NALCO ನೇಮಕಾತಿ 2022 ವಯೋಮಿತಿ :

ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನೇಮಕಾತಿಯ ಉಪ ವ್ಯವಸ್ಥಾಪಕ ಹುದ್ದೆಗಳಿಗೆ ಗರಿಷ್ಟ 35 ವರ್ಷ ಮತ್ತು ಸಹಾಯಕ ಮುಖ್ಯ ವ್ಯವಸ್ಥಾಪಕ ಹುದ್ದೆಗಳಿಗೆ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

NALCO ನೇಮಕಾತಿ 2022 ವೇತನದ ವಿವರ :

ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನೇಮಕಾತಿಯ ಉಪ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 70,000/- ರಿಂದ 2,00,000/-ರೂ ಮತ್ತು ಸಹಾಯಕ ಮುಖ್ಯ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,00,000/- ರಿಂದ 2,60,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

NALCO ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನೇಮಕಾತಿಯ ಉಪ ವ್ಯವಸ್ಥಾಪಕ ಮತ್ತು ಸಹಾಯಕ ಮುಖ್ಯ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆಗಳ ಆಧಾರದ ಮೇಲೆ, ಲಿಖಿತ ಪರೀಕ್ಷೆ/ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

NALCO ನೇಮಕಾತಿ 2022 ಅರ್ಜಿ ಶುಲ್ಕ :

ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನೇಮಕಾತಿಯ ಉಪ ವ್ಯವಸ್ಥಾಪಕ ಮತ್ತು ಸಹಾಯಕ ಮುಖ್ಯ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

NALCO ನೇಮಕಾತಿ 2022 ಅರ್ಜಿ ಸಲ್ಲಿಕೆ :

ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನೇಮಕಾತಿಯ ಉಪ ವ್ಯವಸ್ಥಾಪಕ ಮತ್ತು ಸಹಾಯಕ ಮುಖ್ಯ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://nalcoindia.com/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ನವೆಂಬರ್ 11,2022 ರಿಂದ ಡಿಸೆಂಬರ್ 10,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
NALCO recruitment 2022 notification has been released for 39 deputy manager and assistant general manager Posts. Interested candidates can apply before December 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+