ನಾವಲ್ ಶಿಪ್ ರಿಪೇರಿ ಯಾರ್ಡ್ 145 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 1,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಅಪ್ರೆಂಟಿಸ್ |
| Organisation | ನಾವಲ್ ಶಿಪ್ ರಿಪೇರಿ ಯಾರ್ಡ್ |
| Educational Qualification | 10ನೇ ತರಗತಿ/ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ವಿದ್ಯಾರ್ಹತೆ |
| Job Location | ಕಾರವಾರ (ಕರ್ನಾಟಕ) |
| Salary Scale | ತಿಂಗಳಿಗೆ 9,000/-ರೂ |
| Application Start Date | October 22, 2019 |
| Application End Date | December 1, 2019 |
ವಿದ್ಯಾರ್ಹತೆ:
10ನೇ ತರಗತಿ/ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಶೇ.50 ರಷ್ಟು ಅಂಕಗಳೊಂದಿಗೆ ಮತ್ತು ಐಟಿಐ ವಿದ್ಯಾರ್ಹತೆಯನ್ನು ಶೇ.65ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಕನಿಷ್ಟ 14 ರಿಂದ ಗರಿಷ್ಟ 21 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 9000/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 1,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











