ನಾವಲ್ ಶಿಪ್ ರಿಪೇರ್ ಯಾರ್ಡ್ ನಲ್ಲಿ 180 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 20,2022 ರಿಂದ ನವೆಂಬರ್ 20,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

Naval Ship Repair Yard ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :
ನಾವಲ್ ಶಿಪ್ ರಿಪೇರ್ ಯಾರ್ಡ್ ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಐಟಿಐ ಮತ್ತು ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Naval Ship Repair Yard ನೇಮಕಾತಿ 2022 ವಯೋಮಿತಿ :
ನಾವಲ್ ಶಿಪ್ ರಿಪೇರ್ ಯಾರ್ಡ್ ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಏಪ್ರಿಲ್ 1,2023ರ ಅನ್ವಯ ಕನಿಷ್ಟ 14 ರಿಂದ ಗರಿಷ್ಟ 21 ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮೀಸಲಾತಿ ಅಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Naval Ship Repair Yard ನೇಮಕಾತಿ 2022 ವೇತನದ ವಿವರ :
ನಾವಲ್ ಶಿಪ್ ರಿಪೇರ್ ಯಾರ್ಡ್ ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 7,700/- ರಿಂದ 8,050/-ರೂಗಳ ವರೆಗೆ ಸ್ಟೈಫೆಂಡ್ ಅನ್ನು ನೀಡಲಾಗುವುದು.
Naval Ship Repair Yard ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ನಾವಲ್ ಶಿಪ್ ರಿಪೇರ್ ಯಾರ್ಡ್ ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Naval Ship Repair Yard ನೇಮಕಾತಿ 2022 ಅರ್ಜಿ ಶುಲ್ಕ :
ನಾವಲ್ ಶಿಪ್ ರಿಪೇರ್ ಯಾರ್ಡ್ ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
Naval Ship Repair Yard ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :
ನಾವಲ್ ಶಿಪ್ ರಿಪೇರ್ ಯಾರ್ಡ್ ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ indiannavy.nic.in ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅಕ್ಟೋಬರ್ 20,2022 ರಿಂದ ನವೆಂಬರ್ 20,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್ ಅರ್ಜಿಯನ್ನು ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್ ಅನ್ನು ಕಚೇರಿಗೆ ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
Officer-in-Charge, Dockyard Apprentice School, Naval Ship Repair Yard, Naval Base, Karwar, Karnataka - 581308.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











