ನ್ಯಾಷನಲ್ ಬಯೋಡೈವರ್ಸಿಟಿ ಅಥಾರಿಟಿ 23 ಯಂಗ್ ಪ್ರೊಫೆಷನಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:
ಬಿ.ಇ/ಬಿ.ಟೆಕ್. ಕಾನೂನು ಪದವಿ/ ಕಾನೂನು ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಪದವಿ, ಎಂ.ಫಿಲ್, ಎಂಬಿಎ, ಸಿಎ, ಐಸಿಡಬ್ಲ್ಯೂಎ ಮತ್ತು ಎಸಿಎಸ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ:
ಹುದ್ದೆಗಳಿಗನುಸಾರ ಗರಿಷ್ಟ 30, 35 ಮತ್ತು 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ:
ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 55,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://nbaindia.org/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 30,2020 ರಿಂದ ಡಿಸೆಂಬರ್ 21,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











