ನ್ಯಾಷನಲ್ ಬ್ಯುಲ್ಡಿಂಗ್ಸ್ ಕನ್‌ಸ್ಟ್ರಕ್ಷನ್ ಕಾರ್ಪೋರೇಶನ್ (ಎನ್‌ಬಿಸಿಸಿ) 25 ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 5,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.
NBCC ನೇಮಕಾತಿ 2022 ವಿದ್ಯಾರ್ಹತೆ :
ನ್ಯಾಷನಲ್ ಬ್ಯುಲ್ಡಿಂಗ್ಸ್ ಕನ್‌ಸ್ಟ್ರಕ್ಷನ್ ಕಾರ್ಪೋರೇಶನ್ (ಎನ್‌ಬಿಸಿಸಿ) ನೇಮಕಾತಿಯ ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.
NBCC ನೇಮಕಾತಿ 2022 ವಯೋಮಿತಿ :
ನ್ಯಾಷನಲ್ ಬ್ಯುಲ್ಡಿಂಗ್ಸ್ ಕನ್‌ಸ್ಟ್ರಕ್ಷನ್ ಕಾರ್ಪೋರೇಶನ್ (ಎನ್‌ಬಿಸಿಸಿ) ನೇಮಕಾತಿಯ ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಮೇ 5,2022ರ ಅನ್ವಯ ಗರಿಷ್ಟ 41 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
NBCC ನೇಮಕಾತಿ 2022 ವೇತನ :
ನ್ಯಾಷನಲ್ ಬ್ಯುಲ್ಡಿಂಗ್ಸ್ ಕನ್‌ಸ್ಟ್ರಕ್ಷನ್ ಕಾರ್ಪೋರೇಶನ್ (ಎನ್‌ಬಿಸಿಸಿ) ನೇಮಕಾತಿಯ ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 70,000/- ರಿಂದ 2,00,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
NBCC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ನ್ಯಾಷನಲ್ ಬ್ಯುಲ್ಡಿಂಗ್ಸ್ ಕನ್‌ಸ್ಟ್ರಕ್ಷನ್ ಕಾರ್ಪೋರೇಶನ್ (ಎನ್‌ಬಿಸಿಸಿ) ನೇಮಕಾತಿಯ ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
NBCC ನೇಮಕಾತಿ 2022 ಅರ್ಜಿ ಶುಲ್ಕ :
ನ್ಯಾಷನಲ್ ಬ್ಯುಲ್ಡಿಂಗ್ಸ್ ಕನ್‌ಸ್ಟ್ರಕ್ಷನ್ ಕಾರ್ಪೋರೇಶನ್ (ಎನ್‌ಬಿಸಿಸಿ) ನೇಮಕಾತಿಯ ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಮತ್ತು ವಿಭಾಗದ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
NBCC ನೇಮಕಾತಿ 2022 ಅರ್ಜಿ ಸಲ್ಲಿಕೆ :
ನ್ಯಾಷನಲ್ ಬ್ಯುಲ್ಡಿಂಗ್ಸ್ ಕನ್‌ಸ್ಟ್ರಕ್ಷನ್ ಕಾರ್ಪೋರೇಶನ್ (ಎನ್‌ಬಿಸಿಸಿ) ನೇಮಕಾತಿಯ ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://nbccindia.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಏಪ್ರಿಲ್ 6,2022 ರಿಂದ ಮೇ 5,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











