ನಾರ್ಥರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ (ಎನ್‌ಸಿಎಲ್) 49 ಮೆಡಿಕಲ್ ಸ್ಪೆಷಲಿಸ್ಟ್ ಮತ್ತು ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಫ್‌ಲೈನ್ ಮೂಲಕ ಏಪ್ರಿಲ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:
ಎಂಬಿಬಿಎಸ್, ಸ್ನಾತಕೋತ್ತರ ಪದವಿ, ಡಿಎನ್‌ಬಿ ಮತ್ತು ಬಿಡಿಎಸ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಹುದ್ದೆಗಳಿಗನುಸಾರ ಗರಿಷ್ಟ 42 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳು 3 ವರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳು 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ಮೆಡಿಕಲ್ ಸ್ಪೆಷಲಿಸ್ಟ್ ಮತ್ತು ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000/- ರಿಂದ 2,00,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ನಾರ್ಥರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ (ಎನ್‌ಸಿಎಲ್) ನ ಅಧಿಕೃತ ವೆಬ್‌ಸೈಟ್ http://nclcil.in/HI/index.php ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಏಪ್ರಿಲ್ 30,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
The Office Of General Manager,
Manpower & Recruitment Department,
NCL HQ,
Singrauli,
Madya pradesh-486889.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











