ನ್ಯಾಷನಲ್ ಕೌನ್ಸಿಲ್ ಆಫ್ ಸೈನ್ಸ್ ಮ್ಯೂಸಿಯಂ ನೇಮಕಾತಿ ಕ್ಯುರೇಟರ್ 'ಬಿ' ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ನಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಕಚೇರಿಯ ವಿಳಾಸಕ್ಕೆ ಜೂನ್ 10,2019 ರೊಳಗೆ ಪೋಸ್ಟ್ ಮೂಲಕ ಕಳುಹಿಸಬಹುದು.

| CRITERIA | DETAILS |
| Name Of The Posts | ಕ್ಯುರೇಟರ್ 'ಬಿ' |
| Organisation | ನ್ಯಾಷನಲ್ ಕೌನ್ಸಿಲ್ ಆಫ್ ಸೈನ್ಸ್ ಮ್ಯೂಸಿಯಂ |
| Educational Qualification | ಎಂ.ಎಸ್ಸಿ / ಬಿ.ಇ / ಬಿ.ಟೆಕ್ , ಎಂ.ಎಸ್ / ಎಂ.ಟೆಕ್, ಎಂ.ಇ /ಪಿಹೆಚ್.ಡಿ |
| Job Location | ಭಾರತದೆಲ್ಲೆಡೆ |
| Salary Scale | ತಿಂಗಳಿಗೆ 56,100/-ರಿಂದ 1,77,500/-ರೂ |
| Application Start Date | May 11, 2019 |
| Application End Date | June 10, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಎಂ.ಎಸ್ಸಿ / ಬಿ.ಇ / ಬಿ.ಟೆಕ್ , ಎಂ.ಎಸ್ / ಎಂ.ಟೆಕ್ ಮತ್ತು ಎಂ.ಇ /ಪಿಹೆಚ್.ಡಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಗರಿಷ್ಟ 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 2 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನದ ವಿವರ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/-ರಿಂದ 1,77,500/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು 200/-ರೂ ಅನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ ಮಾಜಿ ಸೈನಿಕ / ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್
http://ncsm.gov.in/ ನಿಂದ ನಿಗಧಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಪೋಸ್ಟ್ ಮೂಲಕ ಜೂನ್ 10,2019 ರೊಳಗೆ ಕಳುಹಿಸಬಹುದು.
ಕಚೇರಿಯ ವಿಳಾಸ:
ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ಸಂಗ್ರಹಾಲಯ,
ಕಸ್ತೂರಬಾ ರಸ್ತೆ,
ಬೆಂಗಳೂರು-560001
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಕ್ಲಿಕ್ ಮಾಡಿ


Click it and Unblock the Notifications











