ನ್ಯಾಷನಲ್ ಡೈರಿ ಡೆವಲಪ್ಮೆಂಟ್ ಬೋರ್ಡ್ (ಎನ್‌ಡಿಡಿಬಿ) ನೇಮಕಾತಿ ವಿಶೇಷ-ಕರ್ತವ್ಯ ಅಧಿಕಾರಿ (ಮೆಕ್ಯಾನಿಕಲ್ ಇಂಜಿನಿಯರ್) (ಸಿವಿಲ್ ಇಂಜಿನಿಯರ್) ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಎನ್‌ಡಿಡಿಬಿಯ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಎನ್‌ಡಿಡಿಬಿಯ ಅಧಿಕೃತ ವೆಬ್‌ಸೈಟ್ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 30,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

| CRITERIA | DETAILS |
| Name Of The Posts | ವಿಶೇಷ-ಕರ್ತವ್ಯ ಅಧಿಕಾರಿ |
| Organisation | ನ್ಯಾಷನಲ್ ಡೈರಿ ಡೆವಲಪ್ಮೆಂಟ್ ಬೋರ್ಡ್ (ಎನ್‌ಡಿಡಿಬಿ) |
| Educational Qualification | ಬಿಇ / ಬಿ.ಟೆಕ್, ಸ್ನಾತಕೋತ್ತರ ಪದವಿ |
| Job Location | ಭಾರತದೆಲ್ಲೆಡೆ |
| Salary Scale | ಸಂಸ್ಥೆಯ ನಿಯಮಾನುಸಾರ |
| Application Start Date | May 15, 2019 |
| Application End Date | May 30, 2019 |
ಶೈಕ್ಷಣಿಕ ವಿದ್ಯಾರ್ಹತೆ :
ಈ ಹುದ್ದೆಗಳಿಗೆ ಬಿಇ / ಬಿ.ಟೆಕ್ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಹೊಂದಿರುವ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಈ ಹುದ್ದೆಗಳಿಗೆ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಎನ್‌ಡಿಡಿಬಿಯ ಅಧಿಕೃತ ವೆಬ್‌ಸೈಟ್ https://www.nddb.coop/ ಗೆ ಹೋಗಿ ಮೇ 30,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿಶೇಷ-ಕರ್ತವ್ಯ ಅಧಿಕಾರಿ (ಮೆಕ್ಯಾನಿಕಲ್ ಇಂಜಿನಿಯರ್) ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ವಿಶೇಷ-ಕರ್ತವ್ಯ ಅಧಿಕಾರಿ (ಸಿವಿಲ್ ಇಂಜಿನಿಯರ್) ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











