ನ್ಯಾಷನಲ್ ಡೈರಿ ರಿಸರ್ಚ್ ಇನ್‌ಸ್ಟಿಟ್ಯೂಟ್ (ಎನ್‌ಡಿಆರ್ಐ) 3 ಎಕ್ಸಿಕ್ಯುಟಿವ್ ಮತ್ತು ಸಿಇಓ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 4,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
ಎಂಬಿಎ, ಪೋಸ್ಟ್ ಗ್ರಾಜುಯೇಶನ್, ಬಿ.ಟೆಕ್, ಬಿ.ವಿ.ಎಸ್ಸಿ ಮತ್ತು ಎ.ಹೆಚ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಜನವರಿ 31,2021ರ ಅನ್ವಯ ಸಿಇಓ ಹುದ್ದೆಗಳಿಗೆ ಗರಿಷ್ಟ 50 ವರ್ಷ ಮತ್ತು ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವೇತನ:
ಸಿಇಓ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,00,000/-ರೂ ಮತ್ತು ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮಾರ್ಚ್ 5 ಮತ್ತು 6,2021ರಂದು ನಡೆಯುವ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಮಾರ್ಚ್ 4,2021ರ ಸಂಜೆ ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಅದಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











