NEKRTC: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 1619 ಚಾಲಕ ಮತ್ತು ಚಾಲಕ-ಕಂ-ನಿರ್ವಾಹಕ ಹುದ್ದೆಗಳ ನೇಮಕಾತಿ

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ದರ್ಜೆ-3 ಮೇಲ್ವಿಚಾರಕೇತರ ವೃಂದದ 1619 ಚಾಲಕ ಮತ್ತು ಚಾಲಕ-ಕಂ-ನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು.

1619 ಹುದ್ದೆಗಳಿಗೆ ಅರ್ಜಿ ಆಹ್ವಾನ… ಫೆ.5ರೊಳಗೆ ಅರ್ಜಿ ಹಾಕಿ

 

ಚಾಲಕ ಮತ್ತು ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿಕೊಂಡು ನಂತರ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 5,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಹುದ್ದೆಗಳ ವಿವರ:

ಹುದ್ದೆಗಳ ವಿವರ:

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ ಇಂತಿವೆ.

ಚಾಲಕ: 857 ಹುದ್ದೆಗಳು

ಚಾಲಕ (ಹಿಂಬಾಕಿ): 68 ಹುದ್ದೆಗಳು

ಚಾಲಕ-ಕಮ್ ನಿರ್ವಾಹಕ: 621 ಹುದ್ದೆಗಳು

ಚಾಲಕ-ಕಮ್ ನಿರ್ವಾಹಕ (ಹಿಂಬಾಕಿ)-73 ಹುದ್ದೆಗಳು

ಒಟ್ಟು: 1619 ಹುದ್ದೆಗಳು

ವಿದ್ಯಾರ್ಹತೆ ಮತ್ತು ಇತರೆ ಅರ್ಹತೆಗಳು:

ವಿದ್ಯಾರ್ಹತೆ ಮತ್ತು ಇತರೆ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಈ ಕೆಳಗಿನ ವಿದ್ಯಾರ್ಹತೆ ಮತ್ತು ಅರ್ಹತೆಗಳನ್ನು ಹೊಂದಿರಬೇಕಿರುತ್ತದೆ.

ಚಾಲಕ ಚಾಲಕ ಕಮ್ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಮುಕ್ತ ವಿವಿಯಿಂದ ಪಡೆದ ಎಸ್‌ಎಸ್‌ಸಿ ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದಿಲ್ಲ.

ಅಭ್ಯರ್ಥಿಯು ಚಾಲ್ತಿಯಲ್ಲಿರುವ ಭಾರಿ ಸರಕು ಸಾಗಾಣಿಕೆ ವಾಹನ (HTV) ಚಾಲನಾ ಪರವಾನಿಗೆಯನ್ನು ಹೊಂದಿ ಕನಿಷ್ಠ 2 ವರ್ಷಗಳಾಗಿರಬೇಕು.

ಪ್ರಯಾಣಿಕರ ಭಾರಿ ವಾಹನ ಚಾಲನಾ ಪರವಾನಿಗೆ ಹಾಗೂ ಕರ್ನಾಟಕ ಪಿಎಸ್‌ವಿ ಬ್ಯಾಡ್ಜ್‌ ಹೊಂದಿರಬೇಕು.

ವಯೋಮಿತಿ:
 

ವಯೋಮಿತಿ:

ವಯೋಮಿತಿ ಮತ್ತು ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಕನಿಷ್ಟ 24 ರಿಂದ ಪರಿ‍ಶಿಷ್ಟ ಜಾತಿ,ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ, ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ ಮತ್ತು ಆಯ್ಕೆ ಪ್ರಕ್ರಿಯೆ:

ವೇತನದ ವಿವರ ಮತ್ತು ಆಯ್ಕೆ ಪ್ರಕ್ರಿಯೆ:

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿಯ ಚಾಲಕ ಮತ್ತು ಚಾಲಕ-ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯನ್ನು ಪೂರೈಸಿದ ಬಳಿಕ ತಿಂಗಳಿಗೆ 12,400/- ರಿಂದ 19,550/-ರೂ ವೇತನವನ್ನು ನೀಡಲಾಗುವುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ದೇಹದಾರ್ಢ್ಯತೆ ಮತ್ತು ದಾಖಲಾತಿ ಪರಿಶೀಲನೆ ಮತ್ತು ಚಾಲನಾ ವೃತ್ತಿ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ನೇಮಕಾತಿಗೆ ಆಯ್ಕೆಯಾದ ಅಭ್ಯರ್ಥಿಗಳು ಈ.ಕ.ರ.ಸಾ.ಸಂಸ್ಥೆಯಿಂದ ರಾಜ್ಯದ ಇತರೆ ಸಾರಿಗೆ ಸಂಸ್ಥೆಗಳಾದ KSRTC, BMTC ಅಥವಾ NWKRTC ಗೆ ವರ್ಗಾವಣೆ ಹೊಂದಲು ಅವಕಾಶಗಳಿರುವುದಿಲ್ಲ.

ಅರ್ಜಿ ಶುಲ್ಕ:

ಅರ್ಜಿ ಶುಲ್ಕ:

ಬ್ಯಾಕ್‌ಲಾಗ್ ಹುದ್ದೆಗಳು ಸೇರಿದಂತೆ, ಅಭ್ಯರ್ಥಿಯು ಅರ್ಜಿ ಸಲ್ಲಿಸಬಯಸುವ ಪ್ರತಿ ಹುದ್ದೆಗೆ ಪ್ರತ್ಯೇಕ ಶುಲ್ಕ ಪರಿಗಣಿಸಲಾಗುವುದದು.

ಸಾಮಾನ್ಯ ವರ್ಗ/2ಎ/2ಬಿ/3ಎ/3ಬಿ ಅಭ್ಯರ್ಥಿಗಳು 600/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ವರ್ಗ-1/ಮಾಜಿ ಸೈನಿಕ/ ಆಶಕ್ತ ಮಾಜಿ ಸೈನಿಕರ ಅವಲಂಬಿತರು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕವೇ ಆನ್‌ಲೈನ್‌ ಅರ್ಜಿಯೊಂದಿಗೆ ಪಾವತಿಸಬೇಕಿರುತ್ತದೆ.

ನಿಗದಿತ ಆನ್‌ಲೈನ್‌ ಶುಲ್ಕ ಪಾವತಿ ಹೊರತುಪಡಿಸಿ ಬೇರೆ ಯಾವುದೇ ರೀತಿಯಲ್ಲಿ ಅರ್ಜಿ ಶುಲ್ಕ ಪಾವತಿಗೆ ಅವಕಾಶವಿರುವುದಿಲ್ಲ. ಒಬ್ಬ ಅಭ್ಯರ್ಥಿಯು ಚಾಲಕ ಹಾಗೂ ಚಾಲಕ-ಕಂ-ನಿರ್ವಾಹಕ ಎರಡೂ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸಿದ್ದಲ್ಲಿ ಪ್ರತಿ ಹುದ್ದೆಗೆ ಪ್ರತ್ಯೇಕ ಅರ್ಜಿ ಶುಲ್ಕದ ಒಟ್ಟು ಮೊತ್ತವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಪ್ರಮುಖ ದಿನಾಂಕಗಳು:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ http://www.nekrtc.org/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಫೆಬ್ರವರಿ 5,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಅನ್‌ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಯನ್ನು ತಪ್ಪದೇ ಡೌನ್‌ಲೋಡ್ ಮಾಡಿದ ಪ್ರತಿಯನ್ನು ತಮ್ಮೊಂದಿಗೆ ಇಟ್ಟುಕೊಳ್ಳಲು ಸೂಚಿಸಿದೆ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಜನವರಿ 6,2020

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 5,2020

ಅಭ್ಯರ್ಥಿಗಳು ನೇರವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
NEKRTC recruitment 2020 notification has been released in official website for the recruitment of 1619 driver and driver cum administrator posts. Interested candidates can apply through online before 5th February 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X