ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ ನಲ್ಲಿ ಅವಶ್ಯವಿರುವ ಎಇಇ (ಸಿವಿಲ್ ) ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಒಟ್ಟು ಎರಡು ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಸಲ್ಲಿಸಲು ಸೂಚಿಸಲಾಗಿದೆ.

ಹುದ್ದೆಗಳ ವಿವರ
ಹುದ್ದೆ ಹೆಸರು: ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್
ಹುದ್ದೆ ಸಂಖ್ಯೆ: 02
ವೇತನ ಶ್ರೇಣಿ: 20600-46500/-
ವಯೋಮಿತಿ: 30 ವರ್ಷಗಳು
ವಿದ್ಯಾರ್ಹತೆ
ಅಂಗೀಕೃತ ವಿಶ್ವವಿದ್ಯಾಲಯದಿಂದ ಸಿವಿಲ್ ಇಂಜಿನಿಯರಿಂಗ್ ಅಥವಾ ತತ್ಸಮಾನ ಶಿಕ್ಷಣ ಪಡೆದಿರಬೇಕು.
ಸಂಬಂಧಪಟ್ಟ ಕ್ಷೇತ್ರದಲ್ಲಿ ಎರಡು ವರ್ಷಗಳ ಅನುಭವವಿರುವವರಿಗೆ ಆದ್ಯತೆ.

ಆಯ್ಕೆ ವಿಧಾನ
ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಗುವುದು.
ಅರ್ಜಿ ಸಲ್ಲಿಕೆ
ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ಲಭ್ಯವಿರುವ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು, ಅಗತ್ಯ ದಾಖಲೆಗಳನ್ನು ಲಗತ್ತಿಸಿ, ನಿಗದಿತ ದಿನಾಂಕದೊಳಗೆ ಕಛೇರಿ ವಿಳಾಸಕ್ಕೆ ತಲುಪಿಸತಕ್ಕದ್ದು.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳ ವಿವರ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-02-2018
ಅರ್ಜಿ ಸಲ್ಲಿಸಬೇಕಾದ ವಿಳಾಸ
ಚೀಫ್ ಇಂಜಿನಿಯರ್ (ಸಿವಿಲ್),
ನ್ಯೂ ಮಂಗಳೂರು ಫೋರ್ಟ್ ಟ್ರಸ್ಟ್
ಪಣಂಬೂರ್, ಮಂಗಳೂರು-575010
ದಕ್ಷಿಣ ಕನ್ನಡ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











