ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (ಎನ್‌ಎಫ್‌ಎಲ್) 30 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಜನವರಿ 21,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
ಪದವಿ, ಬಿ.ಇ/ಬಿ.ಟೆಕ್ ಮತ್ತು ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಈ ಹುದ್ದೆಗಳಿಗೆ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 40,000/- ರಿಂದ 1,40,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು 700/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಅಂಗವಿಕಲ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (ಎನ್‌ಎಫ್‌ಎಲ್) ಅಧಿಕೃತ ವೆಬ್‌ಸೈಟ್ https://www.nationalfertilizers.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 21,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.