NFL Recruitment 2021: ಕಾನೂನು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ 3 ಕಾನೂನು ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಫೆಬ್ರವರಿ 12,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

 ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಎಲ್‌ಎಲ್‌ಬಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಡಿಸೆಂಬರ್ 31,2020ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ಕಾನೂನು ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 1,40,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 700/-ರೂ ಅರ್ಜಿ ಶುಲ್ಕವನ್ನು ಡಿ.ಡಿ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಮಾಜಿ ಸೈನಿಕ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಅನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.nationalfertilizers.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಫೆಬ್ರವರಿ 12,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Chief Manager (HR),
National fertilizers limited,
A-11, Sector-24, Noida,
District gautam budh nagar,
uttar pradesh-201301

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
NFL recruitment 2021 notification has been released for 3 law officer posts. Interested candidates can apply before February 12.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X