ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (ಎನ್‌ಎಫ್‌ಎಲ್) ನಲ್ಲಿ ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 17,2021ರ ಮಧ್ಯಾಹ್ನ 3 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

NFL ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :
ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (ಎನ್‌ಎಫ್‌ಎಲ್) ನಲ್ಲಿ ನೇಮಕಾತಿಯ ನಿರ್ದೇಶಕ ಹುದ್ದೆಗಳಿಗೆ ಇಂಜಿನಿಯರಿಂಗ್ ಪದವಿ, ಎಂಬಿಎ/ಪೋಸ್ಟ್ ಗ್ರಾಜುಯೇಟ್ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ವೃತ್ತಿಯಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
NFL ನೇಮಕಾತಿ 2021 ವಯೋಮಿತಿ :
ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (ಎನ್‌ಎಫ್‌ಎಲ್) ನಲ್ಲಿ ನೇಮಕಾತಿಯ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 45 ಮತ್ತು ಗರಿಷ್ಟ 60 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
NFL ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:
ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (ಎನ್‌ಎಫ್‌ಎಲ್) ನಲ್ಲಿ ನೇಮಕಾತಿಯ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
NFL ನೇಮಕಾತಿ 2021 ವೇತನ :
ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (ಎನ್‌ಎಫ್‌ಎಲ್) ನಲ್ಲಿ ನೇಮಕಾತಿಯ ನಿರ್ದೇಶಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವರ್ಷಕ್ಕೆ 1,80,000/- ರಿಂದ 3,00,000/-ರೂ ವೇತನವನ್ನು ನೀಡಲಾಗುವುದು.
NFL ನೇಮಕಾತಿ 2021 ಅರ್ಜಿ ಶುಲ್ಕ :
ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (ಎನ್‌ಎಫ್‌ಎಲ್) ನೇಮಕಾತಿಯ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ಬಗ್ಗೆ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
NFL ನೇಮಕಾತಿ 2021 ಅರ್ಜಿ ಸಲ್ಲಿಕೆ:
ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (ಎನ್‌ಎಫ್‌ಎಲ್) ನೇಮಕಾತಿಯ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಡಿಸೆಂಬರ್ 17,2021ರ ಮಧ್ಯಾಹ್ನ 3 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಕಚೇರಿ ವಿಳಾಸ:
Secretary, Public Enterprises Selection Board,
Public Enterprises Bhawan,
BlockNo. 14, CGO Complex,
Lodhi Road,
New Delhi-110003.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











