ನ್ಯಾಷನಲ್ ಹೈವೇಸ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ 141 ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ಮ್ಯಾನೇಜರ್ (ಇಲೆಕ್ಟ್ರಿಕಲ್) ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿದ ಬಳಿಕ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿದ್ದಲ್ಲಿ ಅರ್ಜಿಯನ್ನು ಸಲ್ಲಿಸಬಹುದು.ಅಧಿಸೂಚನೆಯಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಕಚೇರಿಯ ವಿಳಾಸಕ್ಕೆ ಮೇ 8,2019 ರೊಳಗೆ ಕಳುಹಿಸಬೇಕು.

| CRITERIA | DETAILS |
| Name Of The Posts | ಡೆಪ್ಯುಟಿ ಜನರಲ್ ಮ್ಯಾನೇಜರ್ & ಮ್ಯಾನೇಜರ್ (ಇಲೆಕ್ಟ್ರಿಕಲ್) |
| Organisation | ನ್ಯಾಷನಲ್ ಹೈವೇಸ್ ಅಥಾರಿಟಿ ಆಫ್ ಇಂಡಿಯಾ (ಎನ್‌ಹೆಚ್‌ಎಐ) |
| Educational Qualification | ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ |
| Job Location | ಭಾರತದೆಲ್ಲೆಡೆ |
| Salary Scale | ತಿಂಗಳಿಗೆ 15,600/- ರಿಂದ 39,100/-ರೂ |
| Application Start Date | March 9, 2019 |
| Application End Date | May 8, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ / ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಖಾಲಿ ಹುದ್ದೆಗಳ ವಿವರ:
| ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
| ಡೆಪ್ಯುಟಿ ಜನರಲ್ ಮ್ಯಾನೇಜರ್ | 117 |
| ಮ್ಯಾನೇಜರ್ | 24 |
| ಒಟ್ಟು | 141 |
ವಯೋಮಿತಿ:
ಡೆಪ್ಯುಟಿ ಮ್ಯಾನೇಜರ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಸರ್ಕಾರದ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ:
ಎನ್‌ಹೆಚ್‌ಎಐ ನೇಮಕಾತಿಯ ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಕಿರುಪಟ್ಟಿಯನ್ನು ಮಾಡಲಾಗುವುದು ನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ವೇತನದ ವಿವರ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,600/- ರಿಂದ 39,100/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ:
ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 8,2019 ರೊಳಗೆ ರಿಜಿಸ್ಟರ್ಡ್ / ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಬೇಕು.
ಕಚೇರಿಯ ವಿಳಾಸ:
ಜನರಲ್ ಮ್ಯಾನೇಜರ್,
ಪ್ಲಾಟ್ ನಂ: ಜಿ-5&6,
ಸೆಕ್ಟರ್ -10 ದ್ವಾರಕ,
ನವದೆಹಲಿ-110075.
ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











