ನ್ಯಾಷನಲ್ ಹೈವೇಸ್ ಅಥಾರಿಟಿಯಲ್ಲಿ 33 ವ್ಯವಸ್ಥಾಪಕ / ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಫೆಬ್ರವರಿ 20,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ವ್ಯವಸ್ಥಾಪಕ / ಮ್ಯಾನೇಜರ್ |
| Organisation | ನ್ಯಾಷನಲ್ ಹೈವೇಸ್ ಅಥಾರಿಟಿ |
| Educational Qualification | ಕಾನೂನು ಪದವಿ, ಪದವಿ, ಬಿ.ಇ/ಬಿ.ಟೆಕ್ |
| Job Location | ಭಾರತದೆಲ್ಲೆಡೆ |
| Salary Scale | ತಿಂಗಳಿಗೆ 37,400/- ರಿಂದ 67,000/-ರೂ |
| Application Start Date | January 21, 2020 |
| Application End Date | February 20, 2020 |
ವಿದ್ಯಾರ್ಹತೆ:
ಕಾನೂನು ಪದವಿ, ಪದವಿ ಮತ್ತು ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಹುದ್ದೆಗಳಿಗನುಸಾರ ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,400/- ರಿಂದ 67,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ನ್ಯಾಷನಲ್ ಹೈವೇಸ್ ಅಥಾರಿಟಿಯ ಅಧಿಕೃತ ವೆಬ್ಸೈಟ್ http://www.nhai.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 20,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಬಳಿಕ ಅಭ್ಯರ್ಥಿಯು ಆನ್‌ಲೈನ್ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಮಾರ್ಚ್ 6,2020ರ ಸಂಜೆ 6 ಗಂಟೆಯೊಳಗೆ ತಲುಪಿಸಬೇಕಿರುತ್ತದೆ.
ಕಚೇರಿಯ ವಿಳಾಸ:
ಡಿಜಿಎಂ-I ಎ,
ನ್ಯಾಷನಲ್ ಹೈವೇಸ್ ಅಥಾರಿಟಿ ಆಫ್ ಇಂಡಿಯಾ,
ಪ್ಲಾಟ್ ನಂ:ಜಿ-5 ಮತ್ತು 6, ಸೆಕ್ಟರ್-10,
ದ್ವಾರಕ, ನವದೆಹಲಿ-110075.
ಅಭ್ಯರ್ಥಿಗಳು ವ್ಯವಸ್ಥಾಪಕ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











