ನ್ಯಾಷನಲ್ ಹೈವೇಸ್ ಅಥಾರಿಟಿ ಆಫ್ ಇಂಡಿಯಾ (ಎನ್‌ಹೆಚ್ಎಐ) 4 ವ್ಯವಸ್ಥಾಪಕ ಮತ್ತು 2 ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 14,2021ರೊಳಗೆ ಮತ್ತು ಆಫ್‌ಲೈನ್ ಮೂಲಕ ಫೆಬ್ರವರಿ 1,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ:
ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 9,300/- ರಿಂದ 39,100/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅರ್ಜಿದಾರರ ಕಿರುಪಟ್ಟಿಯನ್ನು ಮಾಡಲಾಗುವುದು ತದನಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅದಿಕೃತ ವೆಬ್‌ಸೈಟ್ https://www.nhai.gov.in/#/ ಗೆ ಭೇಟಿ ನಿಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 14,2021ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್ ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ಫೆಬ್ರವರಿ 1,2021ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
Deputy General Manager (HR & Admin)-I,
National Highways Authority of india (NHAI),
Plot No: G-5 &6,
Sector - 10, Dwarka,
New Delhi - 110075.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











