NHAI Recruitment 2021: 42 ವ್ಯವಸ್ಥಾಪಕ, ಡಿಜಿಎಂ ಮತ್ತು ಡಿಎಂ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 42 ಹುದ್ದೆಗಳ ನೇಮಕಾತಿ

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ 42 ಡೆಪ್ಯುಟಿ ಜನರಲ್ ಮ್ಯಾನೇಜರ್, ಮ್ಯಾನೇಜರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಏಪ್ರಿಲ್ 12,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

ಪದವಿ, ಸಿಎ/ಎಂಬಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಡೆಪ್ಯುಟಿ ಜನರಲ್ ಮ್ಯಾನೇಜರ್, ಮ್ಯಾನೇಜರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 78,800/- ರಿಂದ 2,09,200/-ರೂ, ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 67,700/- ರಿಂದ 2,08,700/-ರೂ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರಿಂದ 1,77,500/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://nhai.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 12,2021ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಅರ್ಜಿಯನ್ನು ಏಪ್ರಿಲ್ 27,2021ರ ಸಂಜೆ 6 ಗಂಟೆಯೊಳಗೆ ಕಚೇರಿಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
GM (HR & Admn.)-1 A,
National highways authority of india,
Plot No: G-5&6, Sector-10,
Dwarka, New Delhi-110075.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
NHAI recruitment 2021 notification has been released for 42 manger, DGM and DM posts. Interested candidates can apply before April 12.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X