552 ಮಧ್ಯಮ ಹಂತದ ಆರೋಗ್ಯ ಪೂರೈಕೆದಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 552 ಮಧ್ಯಮ ಹಂತದ ಆರೋಗ್ಯ ಪೂರೈಕೆದಾರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 13,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 552 ಹುದ್ದೆಗಳ ನೇಮಕಾತಿ..ಡಿ.13 ಅರ್ಜಿ ಸಲ್ಲಿಸಲು ಕೊನೆಯ ದಿನ

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ,ಬೀದರ್,ಬಳ್ಳಾರಿ (ಹೊಸಪೇಟೆ (ವಿಜಯನಗರ) ತಾಲ್ಲೂಕು ಹೊರತುಪಡಿಸಿ), ಮೈಊರು (ಟಿ.ನರಸಿಪುರ ಮಾತ್ರ),ಕೊಪ್ಪಳ,ಯಾದಗಿರಿ,ಕಲಬುರ್ಗಿ, ರಾಯಚೂರು, ಬಾಗಲಕೋಟೆ, ಕೋಲಾರ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಡಿಸೆಂಬರ್ 10,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು ಆದರೆ ಇದೀಗ ಅರ್ಜಿ ಸಲ್ಲಿಕೆಯ ಅವಧಿಯನ್ನು ಡಿಸೆಂಬರ್ 13,2019ರ ವರೆಗೆ ವಿಸ್ತರಿಸಲಾಗಿದೆ.

CRITERIA DETAILS
Name Of The Posts ಮಧ್ಯಮ ಹಂತದ ಆರೋಗ್ಯ ಪೂರೈಕೆದಾರ (ಎಮ್‌.ಎಲ್‌.ಎಚ್‌.ಪಿ)
Organisation ರಾಷ್ಟ್ರೀಯ ಆರೋಗ್ಯ ಅಭಿಯಾನ
Educational Qualification ಬಿ.ಎಸ್ಸಿ ನರ್ಸಿಂಗ್/ಪೋಸ್ಟ್ ಬಿ.ಎಸ್ಸಿ ನರ್ಸಿಂಗ್
Job Location ಕರ್ನಾಟಕ
Salary Scale ತಿಂಗಳಿಗೆ 24,200/-ರೂ
Application Start Date November 18, 2019
Application End Date December 13, 2019

ಶೈಕ್ಷಣಿಕ ವಿದ್ಯಾರ್ಹತೆ:

ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ ನರ್ಸಿಂಗ್/ಪೋಸ್ಟ್ ಬಿ.ಎಸ್ಸಿ ನರ್ಸಿಂಗ್ ಜೊತೆಗೆ ರಾಜ್ಯ ನರ್ಸಿಂಗ್ ಕೌನ್ಸಿಲ್ ಕೆ.ಎನ್‌.ಸಿ/ಐ.ಎನ್‌.ಸಿ ನಿಂದ ನೊಂದಣಿ ಹೊಂದಿರಬೇಕು. ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಪ್ರಾವಿಣ್ಯತೆ ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 5 ವ‍ರ್ಷ ಮತ್ತು ಪ್ರವರ್ಗ-2ಎ/2ಬಿ/3ಎ ಮತ್ತು 3ಬಿಯ ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,200/-ರೂ (ಕೋಲಾರ ಮತ್ತು ಮೈಸೂರು ಜಿಲ್ಲೆಯಲ್ಲಿ ನೇಮಕ ಆದ ಅಭ್ಯರ್ಥಿಗಳಿಗೆ 22,000/-ರೂ) ವೇತನವನ್ನು ನೀಡಲಾಗುವುದು ಜೊತೆಗೆ ಹೆಚ್ಚುವರಿಯಾಗಿ ಪರಫಾರಮೆನ್ಸ್ ಬೇಸ್ ಇನ್ಸೆಂಟಿವ್ 8,000/-ರೂ ಅನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ನವೆಂಬರ್ 18,2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 13,2019
ಲಿಖಿತ ಪರೀಕ್ಷೆ ಮತ್ತು ಫಲಿತಾಂಶ ಪ್ರಕಟಣೆ ದಿನಾಂಕ: ಡಿಸೆಂಬರ್ 21,2019
ಮೂಲ ದಾಖಲೆಗಳ ಪರಿಶೀಲನೆ ದಿನಾಂಕ: ಡಿಸೆಂಬರ್ 26,2019

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮುಖಾಂತರ ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಮೊದಲು ಅಧಿಕೃತ ವೆಬ್‌ಸೈಟ್ https://www.karnataka.gov.in/hfw/nhm/pages/home.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 13,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
NHM Karnataka recruitment 2019 notification has been released on official website for the recruitment of 552 nurse mid level healthcare provider (MLHPs) posts. Interested candidates can apply through online before 13th December 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+