NHM Recruitment 2020: 1356 ಮಧ್ಯಮ ಹಂತದ ಆರೋಗ್ಯ ಪೂರೈಕೆದಾರ ಹುದ್ದೆಗಳ ನೇಮಕಾತಿ

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಚಿತ್ರದುರ್ಗ, ಚಾಮರಾಜನಗರ, ಶಿವಮೊಗ್ಗ, ಹಾವೇರಿ, ಗದಗ, ಉತ್ತರ ಕನ್ನಡ, ರಾಯಚೂರು ವಿಜಯಪುರ, ಚಿಕ್ಕಮಗಳೂರು, ಬಾಗಲಕೋಟೆ ಜಿಲ್ಲೆಗಳಲ್ಲಿ ಖಾಲಿ ಇರುವ 1356 ಮಧ್ಯಮ ಹಂತದ ಆರೋಗ್ಯ ಪೂರೈಕೆದಾರ (ಎಮ್‌.ಎಲ್‌.ಎಚ್.ಪಿ) ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಜುಲೈ 21,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 1356 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ ನರ್ಸಿಂಗ್/ಪೋಸ್ಟ್ ಬಿ.ಎಸ್ಸಿ ನರ್ಸಿಂಗ್ ಜೊತೆಗೆ ರಾಜ್ಯ ನರ್ಸಿಂಗ್ ಕೌನ್ಸಿಲ್ ಕೆ.ಎನ್‌.ಸಿ /ಐ.ಎನ್‌.ಸಿ ನಿಂದ ನೊಂದಣಿ ಹೊಂದಿರಬೇಕು. ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಪ್ರಾವಿಣ್ಯತೆ ಹೊಂದಿರಬೇಕು.

ವೇತನ ವಿವರ:

ಮಧ್ಯಮ ಹಂತದ ಆರೋಗ್ಯ ಪೂರೈಕೆದಾರ (ಎಮ್‌.ಎಲ್‌.ಎಚ್.ಪಿ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,200/-ರೂ (ಆದ್ಯತೆಯುಳ್ಳ ಜಿಲ್ಲೆಗಳು ಶಿವಮೊಗ್ಗ, ಗದಗ, ಉತ್ತರ ಕನ್ನಡ, ರಾಯಚೂರು, ವಿಜಯಪುರ, ಚಿಕ್ಕಮಗಳೂರು, ಬಾಗಲಕೋಟೆ) ಮತ್ತು ತಿಂಗಳಿಗೆ 22,000/-ರೂ ಇತರೆ ಜಿಲ್ಲೆಗಳು (ಚಿತ್ರದುರ್ಗ, ಚಾಮರಾಜನಗರ, ಹಾವೇರಿ); ಜೊತೆಗೆ ಹೆಚ್ಚುವರಿಯಾಗಿ ಪರಫಾರ್ಮೆನ್ಸ್ ಬೇಸ್ ಇನ್ಸೆಂಟಿವ್ 8,000/-ರೂ ವೇತನವನ್ನು ನೀಡಲಾಗುವುದು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1/ಮಾಜಿ ಸೈನಿಕ ಅಭ್ಯರ್ಥಿಗಳಿಗೆ 40 ವರ್ಷ, 2ಎ/2ಬಿ/3ಎ/3ಬಿ ಹಾಗೂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವ‍ರ್ಷ ವಯೋಮಿತಿಯನ್ನು ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಗಮನಿಸಿ:

ಅಭ್ಯರ್ಥಿಗಳು ಕರ್ನಾಟಕದಲ್ಲಿ ಕನಿಷ್ಟ 10 ವರ್ಷ ವಾಸವಿರಬೇಕು ಹಾಗೂ ಕನ್ನಡವನ್ನು ಒಂದು ಭಾಷೆಯಾಗಿ ಎಸ್‌ಎಸ್‌ಎಲ್‌ಸಿ /10ನೇ ತರಗತಿಯಲ್ಲಿ ಅಭ್ಯಸಿಸಿರಬೇಕು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್‌ಎಚ್ಎಂ) ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 21,2020ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು:

ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: ಜೂನ್ 24,2020
ಆನ್‌ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ಜುಲೈ 21,2020
ಲಿಖಿತ ಪರೀಕ್ಷೆ ಮತ್ತು ಫಲಿತಾಂಶ ಪ್ರಕಟಣೆ ದಿನಾಂಕ: ಆಗಸ್ಟ್ 2,2020
ಮೂಲ ದಾಖಲೆಗಳ ಪರಿಶೀಲನೆ ಪ್ರಾರಂಭ ದಿನಾಂಕ: ಆಗಸ್ಟ್ 4,2020ರಿಂದ ಪ್ರಾರಂಭ

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ https://techkshetra.info/index.html ಗೆ ಭೇಟಿ ನೀಡಬಹುದು.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
National health mission karnataka recruitment 2020 notification has been released for 1356 nurse mid level healthcare provider posts. Interested candidates can apply through online before July 21.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+