ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ, (NHM ಕರ್ನಾಟಕ) ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಬೀದರ್, ಬಳ್ಳಾರಿ, ಕಲಬುರ್ಗಿ, ರಾಯಚೂರು, ಚಿಕ್ಕಮಗಳೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಉತ್ತರ ಕನ್ನಡ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಹಾಗೂ ಹಾವೇರಿ, ಕೋಲಾರ, ಬೆಳಗಾವಿ, ತುಮಕೂರು, ಮೈಸೂರು, ದಕ್ಷಿಣ ಕನ್ನಡ, ಮಂಡ್ಯ, ಉಡುಪಿ, ಚಿಕ್ಕಬಳ್ಳಾಪುರ, ಕೊಡಗು, ದಾವಣಗೆರೆ, ಬೆಂಗಳೂರು ಗ್ರಾಮಾಂರ, ಬೆಂಗಳೂರು ನಗರ ಮತ್ತು ಧಾರವಾಡ ಜಿಲ್ಲೆಗಳಿಗೆ 3006 ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಭಾರತದಾದ್ಯಂತ ಪೂರ್ಣಾವಧಿಯ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಸೆಪ್ಟೆಂಬರ್ 27, 2021 ರಿಂದ ಆರಂಭವಾಗಿ ಅಕ್ಟೋಬರ್ 18, 2021 ರಂದು ಸಂಜೆ 5:00 ಗಂಟೆಗೆ ಮುಕ್ತಾಯಗೊಳ್ಳುತ್ತದೆ.
NHM ಕರ್ನಾಟಕ CHO ನೇಮಕಾತಿ 2021 ವಿದ್ಯಾರ್ಹತೆ:
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇಮಕಾತಿಯ ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು B.Sc ನರ್ಸಿಂಗ್/ಪೋಸ್ಟ್ ಬೇಸಿಕ್ B.Sc ನರ್ಸಿಂಗ್ ಪದವಿ ಅಥವಾ RGUHS ಅಥವಾ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ತತ್ಸಮಾನವಾಗಿರಬೇಕು ಜೊತೆಗೆ ಕರ್ನಾಟಕ ನರ್ಸಿಂಗ್ ಕೌನ್ಸಿಲ್/ಇಂಡಿಯನ್ ನರ್ಸಿಂಗ್ ಕೌನ್ಸಿಲ್‌ನಲ್ಲಿ ನೋಂದಾಯಿಸಿಕೊಂಡಿರಬೇಕು. ಅಭ್ಯರ್ಥಿಗಳು ಇಂಗ್ಲಿಷ್ ಮತ್ತು ಕನ್ನಡ ಭಾಷೆಗಳಲ್ಲಿ ಉತ್ತಮ ಸಂವಹನ ಕೌಶಲ್ಯವನ್ನು ಹೊಂದಿರುವುದರ ಜೊತೆಗೆ ಕಂಪ್ಯೂಟರ್‌ನ ಮೂಲ ಜ್ಞಾನ ಮತ್ತು ಅದರ ಅನ್ವಯಗಳನ್ನು ಹೊಂದಿರಬೇಕು.
NHM ಕರ್ನಾಟಕ CHO ನೇಮಕಾತಿ 2021 ವಯೋಮಿತಿ:
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇಮಕಾತಿಯ ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಎಸ್.ಸಿ/ಎಸ್.ಟಿ/ಪ್ರವರ್ಗ-೧ರ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು, ಗರಿಷ್ಟ ೪೦ ವರ್ಷ ವಯೋಮಿತಿಯೊಳಗಿನ ಮಾಜಿ ಸೈನಿಕ ಅಭ್ಯರ್ಥಿಗಳು, ೨ಎ/೨ಬಿ/೩ಎ/೩ಬಿ ಹಾಗೂ ಇತರೆ ಹಿಂದುಳಿದ ವರ್ಗದ ಗರಿಷ್ಟ ೩೮ ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು.
NHM ಕರ್ನಾಟಕ CHO ನೇಮಕಾತಿ 2021 ವೇತನ:
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇಮಕಾತಿಯ ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ NHM CHO ಅಧಿಸೂಚನೆ 2021 ರಲ್ಲಿ ತಿಳಿಸಿರುವಂತೆ ತಿಂಗಳಿಗೆ 22,000/- ರಿಂದ 24,200/- ರೂಗಳ ವರೆಗೆ ವೇತನವನ್ನು ನೀಡಲಾಗುವುದು.
NHM ಕರ್ನಾಟಕ CHO ನೇಮಕಾತಿ 2021 ಅರ್ಜಿ ಶುಲ್ಕ:
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇಮಕಾತಿಯ ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ಮೊತ್ತ 600/-ರೂ (ಜನ್/ಒಬಿಸಿ) ಮತ್ತು ೩೦೦/-ರೂ (ಪ.ಜಾ/ಪ.ಪಂ/ಮಾಜಿ ಸೈನಿ-ಮಹಿಳೆ ಮತ್ತು ಪುರುಷ) ಅರ್ಜಿ ಶುಲ್ಕವಾಗಿ ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
NHM ಕರ್ನಾಟಕ CHO ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇಮಕಾತಿಯ ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಆಯ್ಕೆಯನ್ನು NHM CHO ಅಧಿಸೂಚನೆ 2021 ರಲ್ಲಿ ಸೂಚಿಸಿದಂತೆ ಆನ್‌ಲೈನ್ ಮೋಡ್‌ನಲ್ಲಿ (ವಸ್ತುನಿಷ್ಠ ಪ್ರಕಾರ) ಲಿಖಿತ ಪರೀಕ್ಷೆಯ ಮೂಲಕ ಮಾಡಲಾಗುತ್ತದೆ.
NHM ಕರ್ನಾಟಕ CHO ನೇಮಕಾತಿ 2021 ಅರ್ಜಿ ಸಲ್ಲಿಕೆ:
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇಮಕಾತಿಯ ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://techkshetra.info/index.html# ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 18,2021ರ ಸಂಜೆ 5:00 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.
NHM ಕರ್ನಾಟಕ CHO ನೇಮಕಾತಿ 2021 ರ ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











