NHM Recruitment: 253 ಮಧ್ಯಮ ಹಂತದ ಆರೋಗ್ಯ ಪೂರೈಕೆದಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 253 ಮಧ್ಯಮ ಹಂತದ ಆರೋಗ್ಯ ಪೂರೈಕೆದಾರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಫೆಬ್ರವರಿ 7,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ,ಬೀದರ್,ಬಳ್ಳಾರಿ ಕೊಪ್ಪಳ,ಯಾದಗಿರಿ,ಕಲಬುರ್ಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

253 ಹುದ್ದೆಗಳ ನೇಮಕಾತಿ....ಫೆ.7ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಮಧ್ಯಮ ಹಂತದ ಆರೋಗ್ಯ ಪೂರೈಕೆದಾರ
Organisation ರಾಷ್ಟ್ರೀಯ ಆರೋಗ್ಯ ಅಭಿಯಾನ
Educational Qualification ಬಿ.ಎಸ್ಸಿ ನರ್ಸಿಂಗ್/ಪೋಸ್ಟ್ ಬಿ.ಎಸ್ಸಿ ನರ್ಸಿಂಗ್
Job Location ಬೀದರ್,ಬಳ್ಳಾರಿ ಕೊಪ್ಪಳ,ಯಾದಗಿರಿ,ಕಲಬುರ್ಗಿ ಮತ್ತು ರಾಯಚೂರು
Salary Scale ತಿಂಗಳಿಗೆ 24,200/-ರೂ
Application Start Date January 18, 2020
Application End Date February 7, 2020

ಶೈಕ್ಷಣಿಕ ವಿದ್ಯಾರ್ಹತೆ:

ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ ನರ್ಸಿಂಗ್/ಪೋಸ್ಟ್ ಬಿ.ಎಸ್ಸಿ ನರ್ಸಿಂಗ್ ಜೊತೆಗೆ ರಾಜ್ಯ ನರ್ಸಿಂಗ್ ಕೌನ್ಸಿಲ್ ಕೆ.ಎನ್.ಸಿ/ಐ.ಎನ್.ಸಿ ನಿಂದ ನೊಂದಣಿ ಹೊಂದಿರಬೇಕು. ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಪ್ರಾವಿಣ್ಯತೆ ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ-2ಎ/2ಬಿ/3ಎ ಮತ್ತು 3ಬಿಯ ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,200/-ರೂ ವೇತನವನ್ನು ನೀಡಲಾಗುವುದು ಜೊತೆಗೆ ಹೆಚ್ಚುವರಿಯಾಗಿ ಪರಫಾರಮೆನ್ಸ್ ಬೇಸ್ ಇನ್ಸೆಂಟಿವ್ 8,000/-ರೂ ಅನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಜನವರಿ 18,2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 7,2020
ಲಿಖಿತ ಪರೀಕ್ಷೆ ಮತ್ತು ಫಲಿತಾಂಶ ಪ್ರಕಟಣೆ ದಿನಾಂಕ: ಫೆಬ್ರವರಿ 15,2020
ಮೂಲ ದಾಖಲೆಗಳ ಪರಿಶೀಲನೆ ದಿನಾಂಕ: ಫೆಬ್ರವರಿ 17 ಮತ್ತು 18,2020

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮುಖಾಂತರ ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಮೊದಲು ಅಧಿಕೃತ ವೆಬ್‌ಸೈಟ್ https://www.karnataka.gov.in/hfw/nhm/pages/home.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 7,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NHM recruitment 2020 notification has been released on official website for the recruitment of 253 nurse mlphs posts. Interested candidates can apply before 7th February 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+