ನ್ಯಾಷನಲ್ ಹೈಡ್ರೋ ಇಲೆಕ್ಟ್ರಿಕ್ ಪವರ್ ಕಾರ್ಪೋರೇಶನ್ (ಎನ್‌ಹೆಚ್‌ಪಿಸಿ) 50 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಜನವರಿ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳ ಬಗ್ಗೆ ತಿಳಿಯಲು ಮುಂದೆ ಓದಿ.
ವಿದ್ಯಾರ್ಹತೆ:
10ನೇ ತರಗತಿ, 12ನೇ ತರಗತಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಬಹುದು.
ವಯೋಮಿತಿ:
ಎನ್‌ಹೆಚ್‌ಪಿಸಿ ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆಯ್ಕೆ ಪ್ರಕ್ರಿಯೆ:
ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೋರೇಶನ್ (ಎನ್‌ಹೆಚ್‌ಪಿಸಿ) ಅಧಿಕೃತ ವೆಬ್‌ಸೈಟ್ http://www.nhpcindia.com/home.aspx ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಕಚೇರಿ ವಿಳಾಸಕ್ಕೆ ಜನವರಿ 15,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
Deputy General Manager,
Parbati-II HE Project,
Nagwain,
Mandi,
Distt.-Kullu,
HImachal Pradesh,
Pincode-175121.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.