NHSRCL Recruitment 2019: 5 ವ್ಯವಸ್ಥಾಪಕ/ ಹಿರಿಯ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೋರೇಶ್ ಲಿಮಿಟೆಡ್ 5 ವ್ಯವಸ್ಥಾಪಕ/ ಹಿರಿಯ ವ್ಯವಸ್ಥಾಪಕ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 24,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ...

ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೋರೇಶ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ವ್ಯವಸ್ಥಾಪಕ/ ಹಿರಿಯ ವ್ಯವಸ್ಥಾಪಕ
Organisation ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೋರೇಶ್ ಲಿಮಿಟೆಡ್ (ಎನ್‌ಎಚ್‌ಎಸ್‌ಆರ್‌ಸಿಎಲ್‌)
Educational Qualification ಡಿಪ್ಲೋಮಾ ಮತ್ತು ಬಿ.ಇ/ ಬಿ.ಟೆಕ್
Job Location ಭಾರತದೆಲ್ಲೆಡೆ
Salary Scale ವ್ಯವಸ್ಥಾಪಕ- 60,000/- ರಿಂದ 1,80,000/-ರೂ,ಹಿರಿಯ ವ್ಯವಸ್ಥಾಪಕ 70,000/- ರಿಂದ 2,00,000/-ರೂ
Application Start Date December 4, 2019
Application End Date December 24, 2019

ವಿದ್ಯಾರ್ಹತೆ:

ಹಿರಿಯ ವ್ಯವಸ್ಥಾಪಕ ಹುದ್ದೆಗಳಿಗೆ ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಬಿ.ಇ/ಬಿ.ಟೆಕ್ ಪದವಿ ಮತ್ತು ವ್ಯವಸ್ಥಾಪಕ ಹುದ್ದೆಗಳಿಗೆ ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ ಅಥವಾ ಬಿ.ಇ/ ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನದ ವಿವರ:

ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 60,000/- ರಿಂದ 1,80,000/-ರೂ ಮತ್ತು ಹಿರಿಯ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 70,000/- ರಿಂದ ರಿಂದ 2,00,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಡಿಸೆಂಬರ್ 24,2019ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿಯ ವಿಳಾಸ:

ಜನರಲ್ ಮ್ಯಾನೇಜರ್ (ಎಚ್‌ಆರ್‌),
ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೋರೇಷನ್ ಲಿಮಿಟೆಡ್,
ಏಪ್ಯಾ ಭವನ, ರಸ್ತೆ-205,
ಸೆಕ್ಟರ್-9 ದ್ವಾರಕಾ,
ನವೆಹಲಿ- 110077.

ಅಭ್ಯರ್ಥಿಗಳು ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೋರೇಷನ್ ಲಿಮಿಟೆಡ್‌ನ ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
National High Speed Rail Corporation Limited (NHSRCL) recruitment 2019 notification has been released on official website for the recruitment of 5 manager/senior manager posts. Interested candidates can apply before 24th December 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X