NHSRCL Recruitment 2020: 61 ಎಕ್ಸಿಕ್ಯುಟಿವ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೋರೇಶನ್ ಲಿಮಿಟೆಡ್ (ಎನ್‌ಹೆಚ್‌ಎಸ್‌ಆರ್‌ಸಿಎಲ್) 61 ಎಕ್ಸಿಕ್ಯುಟಿವ್ ಮತ್ತು ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಜನವರಿ 1,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಎನ್‌ಹೆಚ್‌ಎಸ್‌ಆರ್‌ಸಿಎಲ್ ನಲ್ಲಿ ಉದ್ಯೋಗಾವಕಾಶ...ಜ.1ರೊಳಗೆ ಅರ್ಜಿ ಹಾಕಿ


ವಿದ್ಯಾರ್ಹತೆ:

ಡಿಪ್ಲೋಮಾ. ಬಿ.ಇ/ಬಿ.ಟೆಕ್ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಕನಿಷ್ಟ 20 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ಸೀನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 1,40,000/-ರೂ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರಿಂದ 1,60,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಕಂಪ್ಯೂಟರ್ ಬೇಸ್ಡ್ ಪರೀಕ್ಷೆ, ನೇರ ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.nhsrcl.in/en/home ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 1,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
NHSRCL recruitment 2020 notification has been released for 61 executive and manager posts. Interested candidates can apply through online before January 1.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X