ರಾಷ್ಟ್ರೀಯ ತನಿಖಾ ಸಂಸ್ಥೆ 62 ಇನ್‌ಸ್ಪೆಕ್ಟರ್ ಮತ್ತು ಸಬ್‌ಇನ್‌ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿದ ನಂತರ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 12,2019 ರೊಳಗೆ ಕಳುಹಿಸಬಹುದು.

| CRITERIA | DETAILS |
| Name Of The Posts | ಇನ್‌ಸ್ಪೆಕ್ಟರ್ , ಸಬ್ ಇನ್‌ಸ್ಪೆಕ್ಟರ್ |
| Organisation | ರಾಷ್ಟ್ರೀಯ ತನಿಖಾ ಸಂಸ್ಥೆ |
| Educational Qualification | ಯಾವುದೇ ಪದವಿ |
| Job Location | ಭಾರತದೆಲ್ಲೆಡೆ |
| Salary Scale | ಇನ್‌ಸ್ಪೆಕ್ಟರ್ - 9,300/- ರಿಂದ 34,800/-ರೂ , ಸಬ್ ಇನ್‌ಸ್ಪೆಕ್ಟರ್ - 35,400 /- ರಿಂದ 1,12,400/- ರೂ |
| Application Start Date | March 12, 2019 |
| Application End Date | April 12, 2019 |
ವಿದ್ಯಾರ್ಹತೆ:
ಇನ್‌ಸ್ಪೆಕ್ಟರ್ ಮತ್ತು ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಹೊಂದಿರಬೇಕು.
ಖಾಲಿ ಹುದ್ದೆಗಳ ವಿವರ:
| ಹುದ್ದೆಗಳು | ಹುದ್ದೆಗಳ ಸಂಖ್ಯೆ |
| ಇನ್‌ಸ್ಪೆಕ್ಟರ್ | 26 |
| ಸಬ್ ಇನ್‌ಸ್ಪೆಕ್ಟರ್ | 36 |
| ಒಟ್ಟು | 62 |
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 56 ವರ್ಷ ವಯೋಮಿತಿಯೊಳಗಿನವರಾಗಿರಬೇಕು.
ವೇತನದ ವಿವರ:
ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 9,300/- ರಿಂದ 34,800/-ರೂ ಮತ್ತು ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 35,400 /- ರಿಂದ 1,12,400/- ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ:
ಅಭ್ಯರ್ಥಿಗಳು ಅಧಿಸೂಚನೆಯಲ್ಲಿನ ನಿಗದಿತ ಅರ್ಜಿ ನಮೂನೆಯಂತೆ ಅರ್ಜಿಯನ್ನು ಭರ್ತಿ ಮಾಡಿ ತಮ್ಮ ಸಹಿಯೊಂದಿಗೆ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 12,2019 ರೊಳಗೆ ಕಳುಹಿಸಬೇಕು.
ಕಚೇರಿಯ ವಿಳಾಸ:
ಎಸ್‌ಪಿ (Adm),
ಎನ್‌ಐಎ HQ,
ಸಿಜಿಓ ಕಾಂಪ್ಲೆಕ್ಸ್ ಎದುರು,
ಲೋಧಿ ರೋಡ್,
ನವದೆಹಲಿ-110003
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











