ರಾಷ್ಟ್ರೀಯ ತನಿಖಾ ಸಂಸ್ಥೆ ನೇಮಕಾತಿ 2019 : ಇನ್ಸ್‌ಪೆಕ್ಟರ್ ಮತ್ತು ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ತನಿಖಾ ಸಂಸ್ಥೆ 25 ಇನ್ಸ್‌ಪೆಕ್ಟರ್‌ಗಳು ಮತ್ತು 40 ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 7ನೇ ವೇತನದ ಆಯೋಗದಡಿ ವೇತನವನ್ನು ನೀಡಲಾಗುವುದು. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಆಗಸ್ಟ್‌ 18,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

7ನೇ ವೇತನ ಆಯೋಗದಡಿ ಇನ್ಸ್‌ಪೆಕ್ಟರ್ ಮತ್ತು ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಇನ್ಸ್‌ಪೆಕ್ಟರ್‌ಗಳು ಮತ್ತು ಸಬ್‌ಇನ್ಸ್‌ಪೆಕ್ಟರ್‌
Organisation ರಾಷ್ಟ್ರೀಯ ತನಿಖಾ ಸಂಸ್ಥೆ
Educational Qualification ಪದವಿ
Job Location ಭಾರತದೆಲ್ಲೆಡೆ
Salary Scale 9,300 /-ರೂ ರಿಂದ 1,12,400/- ರೂ
Application Start Date July 18, 2019
Application End Date August 18, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಯಾವುದೇ ವಿಭಾಗದಲ್ಲಿ ಪದವಿಯನ್ನು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಕ್ರಿಮಿನಲ್ ಪ್ರಕರಣಗಳು ಅಥವಾ ಗುಪ್ತಚರ ಕೆಲಸ ಅಥವಾ ಕಾರ್ಯಾಚರಣೆಗಳು ಅಥವಾ ಮಾಹಿತಿ ತಂತ್ರಜ್ಞಾನ ಪ್ರಕರಣಗಳು ಅಥವಾ ಭಯೋತ್ಪಾದನೆ ನಿಗ್ರಹದ ತರಬೇತಿಯ ಪ್ರಕರಣಗಳನ್ನು ನಿರ್ವಹಿಸುವಲ್ಲಿ ಎರಡು ವರ್ಷಗಳ ಅನುಭವಗಳನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ ಶ್ರೇಣಿ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 9,300 /-ರೂ ರಿಂದ 1,12,400/- ರೂ ವೇತನವನ್ನು ನೀಡಲಾಗುವುದು.

ನೇಮಕಾತಿ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿಯನ್ನು ಆಗಸ್ಟ್ 18,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿಯ ವಿಳಾಸ:

ಸ್ ಪಿ(ಅಡ್ಮಿನ್), ಎನ್ಐಎ ಕೇಂದ್ರ ಕಚೇರಿ ಸಿಜಿಒ ಕಾಂಪ್ಲೆಕ್ಸ್, ಲೋಧಿ ರಸ್ತೆ ನವದೆಹಲಿ -110 003.

ರಾಷ್ಟ್ರೀಯ ತನಿಖಾ ಸಂಸ್ಥೆ:

ರಾಷ್ಟ್ರೀಯ ತನಿಖಾ ಸಂಸ್ಥೆ ಭಾರತದಲ್ಲಿ ಭಯೋತ್ಪಾದನೆಯನ್ನು ಎದುರಿಸಲು ಭಾರತ ಸರ್ಕಾರ ಸ್ಥಾಪಿಸಿದ ಕೇಂದ್ರ ಸಂಸ್ಥೆಯಾಗಿದೆ. ಇದು ಕೇಂದ್ರೀಯ ಭಯೋತ್ಪಾದನಾ ಕಾನೂನು ಜಾರಿ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ. ರಾಜ್ಯಗಳ ವಿಶೇಷ ಅನುಮತಿಯಿಲ್ಲದೆ ರಾಜ್ಯಗಳಾದ್ಯಂತ ಭಯೋತ್ಪಾದನೆ-ಸಂಬಂಧಿತ ಅಪರಾಧಗಳನ್ನು ಎದುರಿಸಲು ಏಜೆನ್ಸಿಗೆ ಅಧಿಕಾರವಿದೆ.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

For Quick Alerts
ALLOW NOTIFICATIONS  
For Daily Alerts

English summary
NIA recruitment notification has been released on official website for the recruitment of 65 Inspector And Sub inspector Posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X