NIA Recruitment 2022 : 67 ಸಹಾಯಕ ಸಬ್-ಇನ್ಸ್‌ಪೆಕ್ಟರ್ ಮತ್ತು ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಯಲ್ಲಿ 67 ಸಹಾಯಕ ಸಬ್-ಇನ್ಸ್‌ಪೆಕ್ಟರ್ (ASI) ಮತ್ತು ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಥವಾ ಕೇಂದ್ರಾಡಳಿತ ಪ್ರದೇಶಗಳ ಅಧಿಕಾರಿಗಳಾಗಿರುವ ಅರ್ಹ ಮತ್ತು ಅನುಭವಿ ವ್ಯಕ್ತಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಏಪ್ರಿಲ್ 7, 2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ನೇಮಕಾತಿ ಬಗೆಗೆ ಕೇಳಲಾಗಿರುವ ವಿದ್ಯಾರ್ಹತೆ, ವೇತನ ಮತ್ತು ಆಯ್ಕೆ ಪ್ರಕ್ರಿಯೆ ಇತರೆ ಮಾಹಿತಿಗಳ ಕುರಿತು ತಿಳಿಯಲು ಮುಂದೆ ಓದಿ.

ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ 67 ಹುದ್ದೆಗಳ ನೇಮಕಾತಿ

NIA ನೇಮಕಾತಿ 2022 ವಿದ್ಯಾರ್ಹತೆ ಮತ್ತು ಅನುಭವ :

ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನೇಮಕಾತಿಯ ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳಿಗೆ 12ನೇ ತರಗತಿ/ಇಂಟರ್‌ಮೀಡಿಯೇಟ್ ಅಥವಾ ಸಮನಾದ ವಿದ್ಯಾರ್ಹತೆ ಮತ್ತು ಎಎಸ್‌ಐ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

* ASI - ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಥವಾ ಕೇಂದ್ರಾಡಳಿತ ಪ್ರದೇಶಗಳ ಅಧಿಕಾರಿಗಳು ನಿಯಮಿತ ಆಧಾರದ ಮೇಲೆ ಸದೃಶ ಹುದ್ದೆಗಳನ್ನು ಹೊಂದಿದ್ದು, ಅಪರಾಧ ಪ್ರಕರಣಗಳ ಗುಪ್ತಚರ ಕ್ಷೇತ್ರದಲ್ಲಿ ಕನಿಷ್ಠ ಎರಡು ವರ್ಷಗಳ ಅನುಭವ ಅಥವಾ ASI ಗಾಗಿ ಗುಪ್ತಚರ ಕೆಲಸ ಅಥವಾ Ops ಅಥವಾ IT ನಿರ್ವಹಣೆ ಅನುಭವ ಹೊಂದಿರಬೇಕು.

* HC - NIA ASI HC ಅಧಿಸೂಚನೆ 2022 ರಲ್ಲಿ ವಿವರಿಸಿದಂತೆ ಹುದ್ದೆಗೆ ಸಂಬಂಧಿಸಿದ ವಿದ್ಯಾರ್ಹತೆ ಜೊತೆಗೆ ಪೋಷಕ ಕೇಡರ್ ಅಥವಾ ಇಲಾಖೆಯಲ್ಲಿ ನಿಯಮಿತವಾಗಿ ಸಮಾನವಾದ ಹುದ್ದೆಗಳನ್ನು ಹೊಂದಿರುವ ಕೇಂದ್ರ ಅಥವಾ ರಾಜ್ಯ ಪೊಲೀಸ್ ಸಂಸ್ಥೆ ಅಥವಾ ರಾಜ್ಯ ಪೊಲೀಸ್ ಸಂಸ್ಥೆಗಳು ಅಥವಾ ಸರ್ಕಾರದ ಗುಪ್ತಚರ ಸಂಸ್ಥೆ ಅಥವಾ ಇತರ ತನಿಖಾ ಸಂಸ್ಥೆಗಳ ಅಧಿಕಾರಿಗಳು ಅರ್ಜಿಯನ್ನು ಹಾಕಬಹುದು.

NIA ನೇಮಕಾತಿ 2022 ವಯೋಮಿತಿ :

ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನೇಮಕಾತಿಯ ಸಹಾಯಕ ಸಬ್-ಇನ್ಸ್‌ಪೆಕ್ಟರ್ (ASI) ಮತ್ತು ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಏಪ್ರಿಲ್ 7,2022ರ ಅನ್ವಯ ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

NIA ನೇಮಕಾತಿ 2022 ವೇತನ :

ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನೇಮಕಾತಿಯ ಸಹಾಯಕ ಸಬ್-ಇನ್ಸ್‌ಪೆಕ್ಟರ್ (ASI) ಮತ್ತು ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

NIA ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನೇಮಕಾತಿಯ ಸಹಾಯಕ ಸಬ್-ಇನ್ಸ್‌ಪೆಕ್ಟರ್ (ASI) ಮತ್ತು ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಬಂದ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು ತದನಂತರ ಸಂದರ್ಶನ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

NIA ನೇಮಕಾತಿ 2022 ಅರ್ಜಿ ಶುಲ್ಕ :

ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನೇಮಕಾತಿಯ ಸಹಾಯಕ ಸಬ್-ಇನ್ಸ್‌ಪೆಕ್ಟರ್ (ASI) ಮತ್ತು ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.

NIA ನೇಮಕಾತಿ 2022 ಅರ್ಜಿ ಸಲ್ಲಿಕೆ :

ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನೇಮಕಾತಿಯ ಸಹಾಯಕ ಸಬ್-ಇನ್ಸ್‌ಪೆಕ್ಟರ್ (ASI) ಮತ್ತು ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಏಪ್ರಿಲ್ 7,2022ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
"SP(Adm), NIA HQ, Opposite CGO complex, Lodhi Road, New Delhi 110003"

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
NIA recruitment 2022 notification has been released for 67 assistant sub inspector and head constable posts. Interested candidates can apply before April 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+