ರಾಷ್ಟ್ರೀಯ ಮಾಹಿತಿ ಕೇಂದ್ರ 495 ವಿಜ್ಞಾನಿ-ಬಿ ಮತ್ತು ಟೆಕ್ನಿಕಲ್ / ಸೈಂಟಿಫಿಕ್ ಅಸಿಸ್ಟೆಂಟ್-ಎ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 30,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಓದಿ.

| CRITERIA | DETAILS |
| Name Of The Posts | ವಿಜ್ಞಾನಿ-ಬಿ ಮತ್ತು ಟೆಕ್ನಿಕಲ್ / ಸೈಂಟಿಫಿಕ್ ಅಸಿಸ್ಟೆಂಟ್-ಎ |
| Organisation | ರಾಷ್ಟ್ರೀಯ ಮಾಹಿತಿ ಕೇಂದ್ರ |
| Educational Qualification | ಎಂ.ಎಸ್ಸಿ/ಎಂಎಸ್/ಎಂಸಿಎ/ಬಿ.ಇ/ಬಿ.ಟೆಕ್ ಮತ್ತು ಪದವಿ |
| Job Location | ಭಾರತದೆಲ್ಲೆಡೆ |
| Salary Scale | ವಿಜ್ಞಾನಿ-ಬಿ-ತಿಂಗಳಿಗೆ 56,100/- ರಿಂದ 1,77,500/-ರೂ, ಸೈಂಟಿಫಿಕ್/ಟೆಕ್ನಿಕಲ್ ಅಸಿಸ್ಟೆಂಟ್-ಎ- ತಿಂಗಳಿಗೆ 35,400/- ರಿಂದ 1,12,400/-ರೂ |
| Application Start Date | February 26, 2020 |
| Application End Date | April 30, 2020 |
ವಿದ್ಯಾರ್ಹತೆ:
ಎಂ.ಎಸ್ಸಿ/ಎಂಎಸ್/ಎಂಸಿಎ/ಬಿ.ಇ/ಬಿ.ಟೆಕ್ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆ /ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಮಾರ್ಚ್ 26,2020ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನದ ವಿವರ:
ವಿಜ್ಞಾನಿ-ಬಿ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರಿಂದ 1,77,500/-ರೂ, ಸೈಂಟಿಫಿಕ್/ಟೆಕ್ನಿಕಲ್ ಅಸಿಸ್ಟೆಂಟ್-ಎ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 35,400/- ರಿಂದ 1,12,400/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 800/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ,ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ https://www.calicut.nielit.in/nic/nicrecruitment.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಏಪ್ರಿಲ್ 30,2020ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











